PSI ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಅಶ್ವಥ್ ನಾರಾಯಣ್ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದಾರೆ.
ಹೌದು, ಸಚಿವ ಅಶ್ವಥ್ ನಾರಾಯಣ ವಿರುದ್ದ ಕ್ರಮ ಕೈಗೊಳ್ಳುವಂತೆ ಮಲ್ಲೇಶ್ವರಂ ಆಟದ ಮೈದಾನ ಶಾಸಕರ ಕಚೇರಿಯವೆರೆಗೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ಮುಂದಾಗಿದ್ದರು. ಈ ವೇಳೆ ಪ್ರತಿಭಟನಾ ರ್ಯಾಲಿ ಹೊರಡುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವರಾಗಿರು ಡಾ. ಅಶ್ವಥ್ ನಾರಾಯಣ ಅವರ ಸಹೋದರನನ್ನು ಸಿಐಡಿ ಅಧಿಕಾರಿಗಳು ಕರೆಸಿಕೊಂಡಿದ್ದರು. ಸಚಿವರು ತಮ್ಮ ಪ್ರಭಾವವನನ್ನು ಬಳಸಿ ಮಾಗಡಿ ಮೂಲದ ಅಭ್ಯರ್ಥಿಯನ್ನು ಬಿಡಿಸಿದ್ದಾರೆ ಆ ಮೂಲಕ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಡಾ. ಅಶ್ವಥ್ ನಾರಾಯಣ್ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.