ಪಂಜಾಬ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 86 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸಿಎಂ ಚನ್ನಿ ಅವರು ಚಮ್ಕೌರ್ ಸಾಹಿಬ್ (ಎಸ್ಸಿ) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಪ್ರದೇಶ ಕಾಂಗ್ರೆಸ್ ಕಮಿಟಿ (ಪಿಸಿಸಿ) ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತಸರ ಪೂರ್ವದಿಂದ ಸ್ಪರ್ಧಿಸಲಿದ್ದಾರೆ.
ಈ ಮಧ್ಯೆಯೇ ಪಂಜಾಬಿನ ಮಾಜಿ ಸಚಿವ ಜೋಗೇಂದರ್ ಸಿಂಗ್ ಮಾನ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಎಎಪಿಗೆ ಸೇರಿದ್ದಾರೆ. ಈ ಬಗ್ಗೆ ಸುಧೀರ್ಘ ಪತ್ರ ಬರೆದಿರುವ ಅವರು ನಾನು ನನ್ನ ಕೊನೆ ಉಸಿರಿರುವವರೆಗೂ ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತನಾಗಿ ಇರಲು ಬಯಸಿದ್ದೆ ಎನ್ನುವ ಮೂಲಕ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.