ಬೆಳಗಾವಿ : ಸಚಿವ ಸ್ಥಾನ ಸಿಗದೇ ಬುಸುಗುಡುತ್ತಿರುವ ಶಾಸಕ ವಿನಯ್ ಕುಲಕರ್ಣಿ ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ. ಕಾಂಗ್ರೆಸ್ ಹಿಂದೆ ಮಾಡಿದ್ದ ತಪ್ಪನ್ನೇ ಮತ್ತೆ ಮಾಡುತ್ತಿದೆ ಎಂದು ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ 37 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷವು ಕೊಟ್ಟವರಿಗೆ ಮತ್ತೆ ಸಚಿವ ಸ್ಥಾನ ಕೊಡದೇ ನಮ್ಮ ಸಮುದಾಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
ಅಲ್ಲದೇ ಸಮಾಜ ಇವೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.ಲಿಂಗಾಯತ ಸಮುದಾಯ ಕಾಂಗ್ರೆಸ್ ಪರ ಒಲವು ಹೊಂದಿದೆ. ಆದರೆ ಈ ಸಂದರ್ಭದಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಿದರೆ ಅದು ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆಯ ಮೇಲೆ ನೇರವಾಗಿ ಪರಿಣಾಮ ಬೀರಲಿದೆ ಎಂದಿದ್ದಾರೆ.