ಬೆಳಗಾವಿಯ ನಿನ್ನೆಯ ಅಧಿವೇಶನದಲ್ಲಿ ಬಿಜೆಪಿ ಒಳಜಗಳವು ಮತ್ತೊಂದು ಹಂತಕ್ಕೆ ಹೋಗಿ, ಖುದ್ದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ತಮ್ಮದೇ ಪಕ್ಷದ ನಾಯಕ ಅಶೋಕ್ ವಿರುದ್ಧ ಬಕೆಟ್ ಹಿಡಿದುಕೊಂಡೇ ರಾಜಕಾರಣ ಮಾಡುವವವರು ಅಂತ ಅಸಮಾಧಾನ ಹೊರಹಾಕಿದ್ದರು. ಈ ಸಂಬಂಧ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿಯವರೇ ಬಿಜೆಪಿಯವರಿಗೆ ಕೊಟ್ಟಿರುವ ಹೆಸರು ಬಕೆಟ್ ಜನತಾ ಪಾರ್ಟಿ ಅಂತ ಲೇವಡಿ ಮಾಡಿದೆ.
ಬಿಜೆಪಿಗೆ ಬಿಜೆಪಿಗರಿಂದಲೇ ಸಿಕ್ಕಿದ್ದು ಅದೆಷ್ಟು ಹೆಸರುಗಳು! ಭ್ರಷ್ಟ ಜನತಾ ಪಾರ್ಟಿ, ಬ್ಲಾಕ್ಮೇಲ್ ಜನತಾ ಪಾರ್ಟಿ, ಬ್ಲೂ ಬಾಯ್ಸ್ ಜನತಾ ಪಾರ್ಟಿ,ಬಕೆಟ್ ಜನತಾ ಪಾರ್ಟಿ!
R. ಅಶೋಕ್ ಅವರೇ, ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಯಾರಿಗೆ ಬಕೆಟ್ ಹಿಡಿದಿರಿ? ಯಾವ ಬ್ರಾಂಡ್ ಬಕೆಟ್ ಹಿಡಿದಿರಿ? ಯಾರಿಗೆ ಬಕೆಟ್ ಹಿಡಿದು ನಿಮ್ಮ ಅಕ್ರಮಗಳನ್ನು ಮುಚ್ಚಿಕೊಂಡಿರಿ? ಅಂತ ಟೀಕಿಸಿದೆ.