• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

Explained | ಕರ್ನಾಟಕ ವಿಧಾನಸಭಾ ಚುನಾವಣೆ – 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್

Any Mind by Any Mind
July 2, 2022
in ಕರ್ನಾಟಕ, ದೇಶ
0
Explained | ಕರ್ನಾಟಕ ವಿಧಾನಸಭಾ ಚುನಾವಣೆ – 2023 : ‘ಸಾಮೂಹಿಕ ನಾಯಕತ್ವ’ ಸೂತ್ರದತ್ತ ಕಾಂಗ್ರೆಸ್
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭಾ ಚುನಾವಣೆಗೆ 10 ತಿಂಗಳು ಬಾಕಿ ಇರುವಾಗ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು, ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಸರಣಿ ಸಭೆಗಳು ನಡೆಸಿರುವುದೇ ಈ ಚರ್ಚೆಗೆ ಕಾರಣವಾಗಿದೆ.

ADVERTISEMENT

ಸಭೆಯಲ್ಲಿ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮತ್ತು ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕೂಡ ಭಾಗವಹಿಸಿದ್ದು, ಮುಂಬರುವ ಚುನಾವಣೆಯ ಕಾರ್ಯತಂತ್ರವನ್ನು ರೂಪಿಸಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಹುಲ್ ಗಾಂಧಿಯೊಂದಿಗೆ ಪರಸ್ಪರ ಸಭೆ ನಡೆಸಿದ್ದಾರೆ.

ರಾಜ್ಯ ಘಟಕದಲ್ಲಿನ ಭಿನ್ನಾಭಿಪ್ರಾಯ ಶಮನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಕರೆಸಿಕೊಳ್ಳಲಾಗಿದೆ ಎಂಬುದು ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿನ ಗುಸುಗುಸು. ಆದರೆ, ನನ್ನ ಮತ್ತು ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮುಂದುವರೆದು, ನಮ್ಮ ಸಭೆಗಳು (ರಾಹುಲ್ ಗಾಂಧಿಯವರೊಂದಿಗೆ) ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಮಾತ್ರ. ಒಗ್ಗಟ್ಟಿನಿಂದ ಕಾಂಗ್ರೆಸ್ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದ್ದಾರೆ.

ಸಿಎಂ ಅಭ್ಯರ್ಥಿ ಹಾಗೂ ಸಂಘಟನಾ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ. ಆದರೆ ಪಕ್ಷದ ಮೂಲಗಳ ಪ್ರಕಾರ, “ಸಿಎಂ ಯಾರು ಎಂಬುದನ್ನು ಘೋಷಿಸದೇ , ನಾವು ಒಗ್ಗಟ್ಟಿನಿಂದ ಚುನಾಔಣೆ ಎದುರಿಸುತ್ತೇವೆ  ಎಂದು ನಿರ್ಧರಿಸಲಾಗಿದೆ” ಎಂದು ರಾಜ್ಯ ಕಾಂಗ್ರೆಸ್‌ ನ ಇಬ್ಬರೂ ಪ್ರಮೂಕ ನಾಯಕರು ಒಪ್ಪಿಕೊಂಡಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ಸಭೆಗಳಲ್ಲಿ, ಆಂತರಿಕ ಸಮೀಕ್ಷೆಯ ಕುರಿತು ಕರ್ನಾಟಕದ ಇಬ್ಬರು ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್‌ ಗಾಂಧಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಸಭೆಗಳಲ್ಲಿ ಉಪಸ್ಥಿತರಿದ್ದ ನಾಯಕರೊಬ್ಬರು ಇಂಡಿಯಾ ಟುಡೇ ಟಿವಿಗೆ, “ಇಂದು ಚುನಾವಣೆ ನಡೆದರೆ ಕಾಂಗ್ರೆಸ್ ಸುಮಾರು 120 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತದೆ” ಎಂದು ಹೇಳಿದ್ದಾರೆ

ಕರ್ನಾಟಕ ಕಾಂಗ್ರೆಸ್ 2023 ರ ಚುನಾವಣಾ ಪರಿಶೀಲನಾ ಸಭೆಯಲ್ಲಿ, ಪಕ್ಷವು ಮನೆ-ಮನೆಗೆ ಪ್ರಚಾರ ಮಾಡಲು ಹೆಚ್ಚು ಗಮನ ಹರಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಭಾರತ್ ಜೋಡೋ ಯಾತ್ರೆಯ ಅಡಿಯಲ್ಲಿ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರು ಕರ್ನಾಟಕದ ಒಳನಾಡಿನಲ್ಲಿ ಪ್ರವಾಸ ಮಾಡಿ ಸುಮಾರು ಒಂದು ತಿಂಗಳ ಕಾಲ ಪ್ರಚಾರ ಮಾಡಲು ಕಾಂಗ್ರೆಸ್ ಯೋಜಿಸಿದೆ. ಭಾರತ್ ಜೋಡೋ ಯಾತ್ರೆ ಅಕ್ಟೋಬರ್ 2 ರಿಂದ ಪ್ರಾರಂಭವಾಗುತ್ತದೆ. ಕಾಂಗ್ರೆಸ್‌ನ ಇತರ ಉನ್ನತ ನಾಯಕರೊಂದಿಗೆ ಗಾಂಧಿ ಪರಿವಾರ ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದ ಶ್ರೀನಗರದವರೆಗೆ ನಡೆಯಲಿದ್ದಾರೆ.

ಏತನ್ಮಧ್ಯೆ, ಕೇಂದ್ರ ನಾಯಕತ್ವವು ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣೆಯ ದಿನದವರೆಗೆ ರಾಜ್ಯದಲ್ಲಿ ಉಳಿಯುವಂತೆ ಸೂಚಿಸಿದೆ. “ಇದು ಹೊಸ ಕಾರ್ಯತಂತ್ರದ ಭಾಗವಾಗಿದೆ, ಇದರಲ್ಲಿ ಪ್ರಧಾನ ಕಾರ್ಯದರ್ಶಿಗಳು ಅವರಿಗೆ ನಿಯೋಜಿಸಲಾದ ರಾಜ್ಯದಲ್ಲಿ ಉಳಿಯುತ್ತಾರೆ” ಎಂದು ಕರ್ನಾಟಕದಿಂದ ರಾಜ್ಯಸಭಾ ಸಂಸದರಾಗಿರುವ ಕಾಂಗ್ರೆಸ್ ವಕ್ತಾರ ನಾಸಿರ್ ಹುಸೇನ್ ಹೇಳಿದ್ದಾರೆ.

ಏಕಾಂಗಿ ಹೋರಾಟದಲ್ಲಿ ಕಾಂಗ್ರೆಸ್!

2017 ರ ಚುನಾವಣೆಯ ನಂತರ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ಜನತಾ ದಳ-ಜಾತ್ಯತೀತ (ಜೆಡಿ-ಎಸ್) ಜೊತೆ ಮೈತ್ರಿ ಮಾಡಿಕೊಂಡಿತು. ಮೈತ್ರಿಕೂಡದಲ್ಲಿ 2019 ರ ಲೋಕಸಭಾ ಕದನದಲ್ಲಿ ಹೋರಾಡಿದ್ದಾರೂ ಎರಡೂ ಪಕ್ಷಗಳು ಭಿನ್ನಾಭಿಪ್ರಾಯ ಹೊಂದಿದ್ದವು. ಆಪರೇಷನ್‌ ಕಮಲದ ಮೂಲಕ ಮೈತ್ರಿ ಸರ್ಕಾರ ಪತನವಾಯಿತು.

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ರಾಜ್ಯ ನಾಯಕರಲ್ಲಿ ಒಮ್ಮತ ಮೂಡಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಏತನ್ಮಧ್ಯೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಉದಯವನ್ನು ಕಾಂಗ್ರೆಸ್ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಹಿಂದುತ್ವ V/s ಕನ್ನಡದ ಹೆಮ್ಮೆ!

ಕರ್ನಾಟಕದಲ್ಲಿ ಬಿಜೆಪಿಯನ್ನು ಎದುರಿಸಲು, ಕಾಂಗ್ರೆಸ್ ಸ್ಥಳೀಯವಾಗಿ ತಂತ್ರವನ್ನು ರೂಪಿಸಿದೆ. ಪಕ್ಷವು ತನ್ನ ಪ್ರಚಾರ ಕಾರ್ಯತಂತ್ರವನ್ನು “ಕನ್ನಡಿಗರ ಹೆಮ್ಮೆ”ಯ ಸುತ್ತ ಕೇಂದ್ರೀಕರಿಸುತ್ತದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ದೆಹಲಿಯಲ್ಲಿ ನಡೆಯುತ್ತಿದ್ದು, ಕನ್ನಡಿಗರ ಮೇಲೆ ಹಿಂದಿ ಮತ್ತು ಹಿಂದುತ್ವವನ್ನು ಹೇರುತ್ತಿದೆ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ 3 ಮತ್ತು 4 ನೇ ದರ್ಜೆಯ ಸರ್ಕಾರಿ ಉದ್ಯೋಗಗಳಲ್ಲಿ ವಸತಿ ಆಧಾರಿತ ಮೀಸಲಾತಿ ಖಚಿತಪಡಿಸುತ್ತದೆ ಎಂದು ಕರ್ನಾಟಕದ ಮಾಜಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸಂವಾದದಲ್ಲಿ ಹೇಳಿದ್ದಾರೆ. ಅಲ್ಲದೆ, ಬಿಜೆಪಿಯಿಂದ ಕಾಂಗ್ರೆಸ್‌ಗೆ ಅಧಿಕಾರ ಬದಲಾದರೆ ಜಾತಿವಾರು ಜನಗಣತಿ ಕೂಡ ನಡೆಯಲಿದೆ. ಬಿಜೆಪಿಯನ್ನು ಮೂಲೆಗುಂಪು ಮಾಡಲು ಕಾಂಗ್ರೆಸ್ ಪ್ರಯತ್ನಿಸುವ ಎರಡು ಪ್ರಮುಖ ವಿಷಯಗಳೆಂದರೆ ಭ್ರಷ್ಟಾಚಾರ ಮತ್ತು ನಿರುದ್ಯೋಗ ಎಂದು ಅವರು ಹೇಳಿದ್ದಾರೆ.

Tags: BJPCongress PartyCovid 19Explainedಕೋವಿಡ್-19ಚುನಾವಣೆನರೇಂದ್ರ ಮೋದಿಬಿಜೆಪಿಸಾಮೂಹಿಕ ನಾಯಕತ್ವಸೂತ್ರದತ್ತ ಕಾಂಗ್ರೆಸ್
Previous Post

ಪಂತ್- ಜಡೇಜಾ ಭರ್ಜರಿ ಜೊತೆಯಾಟ: ಭಾರತಕ್ಕೆ ದಿನದ ಗೌರವ!

Next Post

ಫ್ಯಾಸಿಷ್ಟರ ಬೆಳವಣಿಗೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪಾತ್ರ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಫ್ಯಾಸಿಷ್ಟರ ಬೆಳವಣಿಗೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪಾತ್ರ

ಫ್ಯಾಸಿಷ್ಟರ ಬೆಳವಣಿಗೆಯಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪಾತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada