ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ: ಜೂನ್‌ 11 ರಂದು ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆಗೆ ಕರೆ

ಪೆಟ್ರೋಲ್‌, ಡಿಸೇಲ್‌  ಬೆಲೆಯೇರಿಕೆ ವಿರೋಧಿಸಿ ಜೂನ್‌ 11 ರಂದು  ದೇಶಾದ್ಯಂತ ಕಾಂಗ್ರೆಸ್‌ ಪಕ್ಷ ಪೆಟ್ರೋಲ್‌ ಬಂಕ್‌ಗಳ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಈಗಾಗಲೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ   100 ರೂ ತಲುಪಿದ್ದು ಡಿಸೇಲ್‌ ದರದಲ್ಲಿಯೂ ಏರಿಕೆ ಕಂಡಿದೆ. ಕರೋನಾ ಸಂಕಷ್ಟದ ನಡುವೆ ವಾಹನ ಸವಾರರಿಗೆ ಬೆಲೆಯೇರಿಕೆಯ ಬಸಿ ಮುಟ್ಟಿದೆ.

ಮೇ 4 ರಿಂದ ಇವರೆಗೂ ಒಟ್ಟು 20 ಬಾರಿ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದಂತೆ ದೇಶದ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಿಸುತ್ತಿರುತ್ತವೆ. ಇದೀಗ ಬೆಲೆಯೇರಿಕೆ ಗರಿಷ್ಟ ಮಟ್ಟ ತಲುಪಿದ್ದು, ಜನಸಾಮಾನ್ಯರು  ಪರದಾಡುವಂತಾಗಿದೆ. ಈ ಸಂಬಂಧ  ಕೇಂದ್ರ ಸರ್ಕಾರದ ಹಾಗು ಜನಪ್ರತಿನಿಧಿಗಳ ಗಮನ ಸೆಳೆಯಲು ಕಾಂಗ್ರೆಸ್‌ ನಾಯಕರು ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಜೂನ್‌ 11 ರಂದು ಪಕ್ಷದ ಎಲ್ಲಾ ರಾಜ್ಯ ಘಟಕಗಳಿಂದ ಪ್ರತಿಭಟಿಸುವಂತೆ  ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಾಲ್‌  ಸೂಚನೆ ನೀಡಿದ್ದು, ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಸಮಸ್ಯೆ, ನಿರುದ್ಯೋಗ, ಉದ್ಯೋಗ, ವೇತನ ಕಡಿತದಿಂದಾಗಿ ಜನ ಸಂಕಷ್ಟಕ್ಕೊಳಗಾಗಿರುವ ಹೊತ್ತಲ್ಲಿ ಅನಿಯಂತ್ರಿತ  ಇಂಧನ ಬೆಲೆ ಏರಿಕೆಯೂ ಜನರನ್ನು ಮತ್ತಷ್ಟು ಸಮಸ್ಯೆಗೆ ನೂಕಿದೆ. ಈ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಲು ಅಭಿಯಾನ ನಡೆಸುವಂತೆ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...