ಭಾರತ(India) ಮತ್ತು ಅಮೆರಿಕ(America) ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಹಾಗೂ ಭಾರತದ ಕೇಂದ್ರ ಬಿಜೆಪಿ ಸರ್ಕಾರ ಸಮರ್ಥಿಸಿಕೊಂಡರೆ, ಕಾಂಗ್ರೆಸ್ ಟ್ರ್ಯಾಪ್ ಡೀಲ್ ಎಂದು ಟೀಕೆ ಮಾಡಿದೆ. ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದದ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಎಪ್‌ಸ್ಟೀನ್ ಫೈಲ್ಸ್(Epstein files) ಭಯದಿಂದ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆಯೇ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಂಡಿದೆ.

ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಅಮೇರಿಕಾ ಮನಬಂದಂತೆ ಏರಿಸಿತ್ತು. ಈಗ ಅದನ್ನು 25%ರಿಂದ 18%ಕ್ಕೆ ಇಳಿಸಿ ಭಾರತಕ್ಕೆ ಮಹದುಪಕಾರ ಮಾಡಿದಂತೆ ನಾಟಕ ಮಾಡುತ್ತಿದೆ. ಆದರೆ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಭಾರತ ಸೊನ್ನೆಗಿಳಿಸಿದೆ.

ಸದ್ಯ ಭಾರತ ಶೇಕಡಾ 40ರಷ್ಟು ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಲೆಬಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಖರೀದಿಯನ್ನು ಕೈಬಿಟ್ಟು ಅಮೆರಿಕ ಮತ್ತು ವೆನಿಜುವೆಲಾ ದೇಶಗಳಿಂದ ತೈಲ ಖರೀದಿಸಲು ಒಪ್ಪಿಕೊಂಡಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದ್ದು ಅದರ ಪರಿಣಾಮವಾಗಿ ಉಳಿದ ಅಗತ್ಯವಸ್ತುಗಳು ಕೂಡಾ ದುಬಾರಿಯಾಗಲಿದೆ.

ಈ ಒಪ್ಪಂದ ಭಾರತದ ರೈತರ ಪಾಲಿನ ಮರಣಶಾಸನವಾಗಲಿದೆ ಎನ್ನುವುದು ಕಾಂಗ್ರೆಸ್‌ನ ಪ್ರಮುಖ ಆರೋಪವಾಗಿದ್ದು, ಭಾರತಕ್ಕೆ ಹೋಲಿಸಿದರೆ ಅತೀ ಹೆಚ್ಚಿನ ಪ್ರಮಾಣದ ಸಬ್ಸಿಡಿ ಪಡೆಯುತ್ತಿರುವ ಅಮೆರಿಕದ ರೈತರು ಭಾರತದ ಕೃಷಿ ಉತ್ಪನ್ನಗಳಿಗಿಂತ ಕಡಿಮೆ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಿದೆ.

ಈ ಅಪಾಯವನ್ನು ತಪ್ಪಿಸಲಿಕ್ಕಾಗಿಯೇ ಇಲ್ಲಿಯವರೆಗಿನ ಎಲ್ಲ ಸರ್ಕಾರಗಳು ಅಮೆರಿಕದಿಂದ ಆಮದಾಗುತ್ತಿರುವ ಕೃಷಿ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದ ಸುಂಕ ಹೇರುತ್ತಾ ಬಂದಿವೆ. ಈಗ ಈ ಆಮದು ಸುಂಕವನ್ನು ರದ್ದುಗೊಳಿಸದರೆ ದೇಶದ ಮಾರುಕಟ್ಟೆಗಳಲ್ಲಿ ಅಮೆರಿಕದ ಅಗ್ಗದ ದರದ ಆಹಾರಧಾನ್ಯ, ಹಣ್ಣು, ತರಕಾರಿ ಮತ್ತು ಡೇರಿ ಉತ್ಪನ್ನಗಳು ಲಗ್ಗೆ ಇಡಲಿದೆ.. ಇದರಿಂದ ಭಾರತದ ರೈತರು ದಿವಾಳಿ ಸ್ಥಿತಿ ತಲುಪಲಿದೆ.

ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್ಸ್ಟೀನ್ ಫೈಲ್ಸ್ ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎನ್ನುವ ಗಂಭೀರ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಅಲ್ಲದೇ ಈ ಬಗ್ಗೆ ದೇಶದ ಜನತೆಗೆ ಉತ್ತರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದೆ.






