• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗಬೇಕಾಗುತ್ತೆ: ಸಿಎಂ ಬಸವರಾಜ ಬೊಮ್ಮಾಯಿ

Any Mind by Any Mind
May 2, 2023
in ರಾಜಕೀಯ
0
ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗಬೇಕಾಗುತ್ತೆ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಸಿಎಂ ಬಸವರಾಜ ಬೊಮ್ಮಾಯಿ ಇಂದು ಧಾರವಾಡದ ನವಲಗುಂದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಪರವಾಗಿ ರೋಡ್ ಶೋ ನಡೆಸಿ ಮಾತನಾಡಿದರು.ʻಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅದನ್ನು ಬ್ಯಾನ್ ಮಾಡುತ್ತೆವೆ ಎಂದು ಕಾಂಗ್ರೆಸ್ ಅವರು ಹೇಳುತ್ತಿದ್ದಾರೆ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗಿಯುತ್ತಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ʻನವಲಗುಂದ ಬಂಡಾಯದ ನಾಡು. ಸ್ವಾತಂತ್ರದ ನಂತರ ರೈತರ ಬಂಡಾಯ ಪ್ರಾರಂಭ ಆಗಿದ್ದು ನವಲಗುಂದ ಮತ್ತು ನರಗುಂದದಿಂದ. ಈ ಭಾಗದ ರೈತರು ಅತ್ಯಂತ ಶ್ರಮ ಜೀವಿಗಳು. ಹಿಂದೆ ಇಲ್ಲಿ ಮಲಪ್ರಭ ಹರಿದರೂ ಈ ಭಾಗದ ಜಮೀನಿಗೆ ನೀರು ಬಂದಿರಲಿಲ್ಲ. ನೀರು ಕೊಡದೇನೇ ರೈತರಿಗೆ ಕರ ವಸೂಲಿ ಮಾಡಿ ಪೊಲೀಸರಿಂದ ರೈತರ ಮೇಲೆ ಗುಂಡು ಹಾಕಿದವರು ಕಾಂಗ್ರೆಸ್ ಪಕ್ಷದವರು ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ಆಡಳಿತದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ರು. ʻಮಹದಾಯಿ ನೀರನ್ನು ಮಲಪ್ರಭೆ ಮೂಲಕ ನವಲಗುಂದ ನರಗುಂದಕ್ಕೆ ತರುವುದು ನಮ್ಮ ಹೋರಾಟ ಆಗಿತ್ತು. 20 ವರ್ಷದ ಹೋರಾಟಕ್ಕೆ ಪ್ರತಿ ಬಾರಿ ಅಡ್ಡ ಹಾಕಿದ್ದು ಕಾಂಗ್ರೆಸ್ ಅವರು. ಸೋನಿಯಾಗಾಂಧಿ ಅವರು ಕರ್ನಾಟಕಕ್ಕೆ ಒಂದು ಹನಿ ಮಹದಾಯಿ ನೀರು ಕೊಡುವುದಿಲ್ಲ ಅಂತ ಗೋವಾದಲ್ಲಿ ಹೇಳುತ್ತಾರೆ. ರೈತರಿಗೆ ಉಪಯೋಗವಾಗಲಿ ಎಂದು 100 ಕೋಟಿ ಖರ್ಚು ಮಾಡಿ ಕಾಲುವೆ ಮಾಡಿದರೆ ಕಾಂಗ್ರೆಸ್ ಅವರು ಅದಕ್ಕೆ ಗೋಡೆ ಕಟ್ಟಿದರು. ನ್ಯಾಯ ಕೇಳಿದ ಕಳಸಾ ಬಂಡೂರಿ ಹೋರಾಟಗಾರರಿಗೆ ಪೊಲಿಸರು ಎರಡು ವಾಹನಗಳು ಮಧ್ಯೆ ಹೋಗಲು ಬಿಟ್ಟು ದನಕ್ಕೆ ಹೊಡೆದ ಹಾಗೆ ಹೊಡೆದಿದ್ದಾರೆ. ಮನೆಗೆ ಒಳಗೆ ಹೋಗಿ ಮಹಿಳೆಯರನ್ನು ಹೊಡೆದರು. ಅಂತಹ ಸಿದ್ದರಾಮಯ್ಯ ಸರ್ಕಾರಕ್ಕೆ ಮತ ಹಾಕುತ್ತೀರಾ?ʼ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾದರು.

ADVERTISEMENT

ʻಸಾಮಾಜಿಕ ನ್ಯಾಯ ಎನ್ನುತ್ತಿದ್ದ ಕಾಂಗ್ರೆಸ್‌ನವರು ಮೀಸಲಾತಿ ಹೆಚ್ಚಳದ ನಮ್ಮ ನಿರ್ಧಾರವನ್ನು ಸಂವಿಧಾನ ವಿರೋಧಿ ಎಂದು ಹೇಳಿದರು. ನಾವು ಎಲ್ಲ ಸಮಾಜಗಳಿಗೆ ನ್ಯಾಯ ಕೊಟ್ಟಿದ್ದೀವಿ. ಆದರೆ ಅವರು ಹಿಂಬಾಗಿಲ ಮೂಲಕ ಕೋರ್ಟ್ ಗೆ ಹೋಗಿದ್ದಾರೆ. ಈಗ ಕಾಂಗ್ರೆಸ್ ಅವರು ಭಜರಂಗದಳ ನಿಷೇಧ ಮಾಡುವುದಾಗಿ ಹೇಳುತ್ತಾರೆ. ದೇಶದ್ರೋಹ, ಭಯೋತ್ಪಾದನೆ ಮಾಡುವ ಪಿಎಫ್ಐ ಜೊತೆ ಭಜರಂಗದಳವನ್ನು ಸೇರಿಸಿದ್ದಾರೆ. ನಮ್ಮ ಪ್ರಧಾನಿ ಮೋದಿ ಈಗಾಗಲೇ ಪಿಎಫ್ಐ ಬ್ಯಾನ್ ಮಾಡಿದ್ದಾರೆ. ನಮ್ಮ ಪರಂಪರೆ, ನಮ್ಮ ಧರ್ಮ, ನಮ್ಮ ಇತಿಹಾಸವನ್ನು ಗಟ್ಟಿಕೊಳಿಸಿರುವುದು ಭಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ. ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಆಗ್ತಿದ್ರೆ, ದಕ್ಷಿಣದ ಅಂಜನಾದ್ರಿಯಲ್ಲಿ ಆಂಜನೇಯ ಸ್ವಾಮಿ ಅಭಿವೃದ್ಧಿ ಆಗ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ʻಸಬ್ ಕೆ ಸಾಥ್, ಸಬ್ ಕೆ ವಿಕಾಸ್ ಎನ್ನುವುದು ನಮ್ಮ ಸರ್ಕಾರ ಮಾಡುತ್ತಿದೆ. ಅದನ್ನು ನೀವು ಮನೆಮನೆಗೆ ಹೋಗಿ ಜನರಿಗೆ ತಿಳಿಸಬೇಕು. ರಾಜಕಾರಣದಲ್ಲಿ ಜನ ಬಹಳ ಮಾತನಾಡುತ್ತಾರೆ. ಆದ್ರೆ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಏನನ್ನೂ ಮಾತನಾಡದೇ ಕೆಲಸ ಮಾಡಿ ತೋರಿಸುವ ವ್ಯಕ್ತಿ. ತಾಲ್ಲೂಕಿನ ಅಭಿವೃದ್ಧಿಗೆ ಶಂಕರ ಪಾಟೀಲ್ ಮುನೇನಕೊಪ್ಪ ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡರು.

Tags: #basavarajbommai#bjp#congress#election2023#karnataka#karnatakaassemblyelection#pratidhvani#pratidhvanidigital#pratidhvaninews#statement
Previous Post

ʻಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ಮೀಸಲಾತಿ, ಭಜರಂಗದಳವನ್ನು ಮುಟ್ಟಿ ನೋಡಲಿʼ:  ಕೋಲಾರ ಸಂಸದ ಮುನಿಸ್ವಾಮಿ ಸವಾಲು..!

Next Post

ʻರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ನೈತಿಕತೆಯೇ ಇಲ್ಲʼ: ಬಸನಗೌಡ ಪಾಟೀಲ್‌ ಯತ್ನಾಳ್‌

Related Posts

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!
ಇದೀಗ

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

by ಪ್ರತಿಧ್ವನಿ
February 2, 2026
0

ಬೆಂಗಳೂರು : ಸರ್ಕಾರಿ ಉದ್ಯೋಗಗಳಲ್ಲಿ ಸಾಮಾನ್ಯವಾಗಿ ದುಡಿಯುವ ಜನರಿಗೆ ತುಂಬಾ ಸುರಕ್ಷಿತ ಮತ್ತು ಅನುಕೂಲಕರ ಎಂದುಕ್ಕೊಳ್ಳುತ್ತೇವೆ, ಆದರೆ  ಉತ್ತರ ಪ್ರದೇಶದಲ್ಲಿ ಈಗ ಹಾಗಲ್ಲ. ಏಕೆ ಗೊತ್ತೆ ?ಯೋಗಿ...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Next Post
ʻರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ನೈತಿಕತೆಯೇ ಇಲ್ಲʼ: ಬಸನಗೌಡ ಪಾಟೀಲ್‌ ಯತ್ನಾಳ್‌

ʻರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ನೈತಿಕತೆಯೇ ಇಲ್ಲʼ: ಬಸನಗೌಡ ಪಾಟೀಲ್‌ ಯತ್ನಾಳ್‌

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!