ಬೆಂಗಳೂರು : ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲೋದು ಪಕ್ಕಾ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮೇ 13ರಂದು ಪ್ರಕಟವಾಗಲಿರುವ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆಲ್ಲೋದು ಪಕ್ಕಾ ಎಂದಿದ್ದಾರೆ.
ಮೇ 15ರಂದು ಕಾಂಗ್ರೆಸ್ ತನ್ನ ಮೊದಲ ಸಂಪುಟ ಸಭೆಯನ್ನು ಕಡೆಯಲಿದೆ. ಈ ಸಂಪುಟ ಸಭೆ ಯಾರ ನೇತೃತ್ವದಲ್ಲಿ ನಡೆಯಬೇಕು..? ಯಾರು ಈ ರಾಜ್ಯದ ಮುಂದಿನ ಸಿಎಂ ಅನ್ನೋದನ್ನು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಲಿದ್ದಾರೆ ಎಂದು ಹೇಳಿದರು.
ಅಲ್ಲದೇ ನಮ್ಮ ಮೊದಲ ಸಂಪುಟ ಸಭೆಯಲ್ಲಿ ನಾವು ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ 5 ಆಶ್ವಾಸನಗಳನ್ನು ಸಾಕಾರಗೊಳಿಸುವ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದೂ ಸಹ ಹೇಳಿದ್ದಾರೆ.