ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದಿದ್ದಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ವಿ. ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಆದಂತಾಗಿದೆ.

ಹೈಕೋರ್ಟ್ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿದ್ದ ಮತಗಳನ್ನು ಎಣಿಕೆ ಮಾಡಲಾಗಿದೆ., ಈ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಈ ಗೆಲುವಿನಿಂದ ಹಾಲಿ ಬಿಜೆಪಿ ಸದಸ್ಯ ಹಾಗೂ ವಿಧಾನ ಪರಿಷತ್ ಉಪಸಭಾಪತಿಯಾಗಿದ್ದ ಎಂ.ಕೆ. ಪ್ರಾಣೇಶ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಈ ತೀರ್ಪಿನೊಂದಿಗೆ ಗಾಯತ್ರಿ ಶಾಂತೇಗೌಡ ಅವರು ಉಳಿದಿರುವ ಸುಮಾರು ಒಂದೂವರೆ ವರ್ಷಗಳ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಅಧಿಕಾರ ಅನುಭವಿಸಲಿದ್ದಾರೆ. ಈ ಗೆಲುವು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜಕೀಯವಾಗಿ ದೊಡ್ಡ ಶಕ್ತಿ ತಂದುಕೊಟ್ಟಿದೆ.
ಇನ್ನೂ ಓ ಬಗ್ಗೆ ಪ್ರತಿಕ್ರಿಯಿಸಿರುವ, ಗಾಯತ್ರಿ ಶಾಂತೇಗೌಡ, ಸುದೀರ್ಘ ಕಾಲದ ಕಾನೂನು ಹೋರಾಟದ ನಂತರ ನ್ಯಾಯ ಸಿಕ್ಕಿದೆ. ಸತ್ಯಕ್ಕೆಯಾವತ್ತಿದ್ದರೂ ಜಯ ಸಿಕ್ಕೇ ಸಿಗುತ್ತದೆ. ವಿಧಾನಪರಿಷತ್ ಚುನಾವಣೆಯಲ್ಲಿ ವೇಳೆ ನಾನು ಪ್ರಾಣೇಶ್ ವಿರುದ್ಧ ಕೇವಲ 6 ಮತಗಳಿಂದ ಸೋಲು ಕಂಡಿದ್ದೆ. ಇದರ ವಿರುದ್ಧ ನಾನು ಹೈಕೋರ್ಟ್ ಮೆಟ್ಟಿಲೇರಿದ್ದೆ. ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ಮತ್ತು ಮರು ಎಣಿಕೆಯ ಫಲಿತಾಂಶ ಇಂದು ಮುಚ್ಚಿದ ಲಕೋಟೆಯಲ್ಲಿ ಪ್ರಕಟವಾಗಿದ್ದು ನಾನು 9 ಮತಗಳಿಂದ ವಿಜೇತರಾಗಿದ್ದೇನೆ ಎಂದು ತೀರ್ಪು ನೀಡಿದೆ ಇದು ನನಗೆ ಸಂತೋಷ ನೀಡಿದೆ ಎಂದು ಗೆಲುವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.






