ಬೆಂಗಳೂರು : ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮೊದಲ ಬಾರಿಗೆ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಆದರೆ ಕಾಂಗ್ರೆಸ್ ಶೀಘ್ರವೇ ಬೆಂಗಳೂರಿಗೆ ಬರುವಂತೆ ಶೆಟ್ಟರ್ಗೆ ಬುಲಾವ್ ನೀಡಿದ್ದು ಕುತೂಹಲ ಹೆಚ್ಚಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಶೆಟ್ಟರ್ಗೆ ಬೆಂಗಳೂರಿಗೆ ಬರುವಂತೆ ಬುಲಾವ್ ನೀಡಿದ್ದಾರೆ.
ಲಿಂಗಾಯತ ಸಮುದಾಯದ ಪ್ರಬಲ ನಾಯಕನಾಗಿರುವ ಶೆಟ್ಟರ್ಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಮೂಲಕ ಅವರ ಘನತೆ ಕಾಪಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎನ್ನಲಾಗಿದೆ. ಹೀಗಾಗಿ ಇಂದು ಶಾಸಕಾಂಗ ಪಕ್ಷದ ಸಭೆಗೆ ಶೆಟ್ಟರ್ಗೆ ಆಹ್ವಾನಿಸಲಾಗಿದ್ದು ಪಕ್ಷದಲ್ಲಿ ಉನ್ನತ ಹುದ್ದೆ ನೀಡಲಿದ್ದಾರೆ ಎನ್ನಲಾಗಿದೆ.