ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಗೆ ಅನುಮತಿ ವಿರೋಧಿಸಿ ನಡೆಯುತ್ತಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಕೋಲಾರ ಕುರುಬರ ಸಂಘದ ಮುಖಂಡ ರವೀಂದ್ರ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ನಗರದ ಪ್ರೆಸ್ಕ್ಲಬ್ನಲ್ಲಿ ದಾಖಲೆಗಳನ್ನು ಹಿಡಿದುಕೊಂಡು ಅವರು ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವಾಗಲೇ ದಿಢೀರ್ ಹಾರ್ಟ್ ಅಟ್ಯಾಕ್ ಆಗಿದೆ.ಇದರಿಂದ ಕುಸಿದ ಬಿದ್ದ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ.ಒಂದೆಡೆ ಸಿಎಂ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿದ್ದು, ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.