ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ (Bypoll) ಫಲಿತಾಂಶದ ಹುಮ್ಮಸ್ಸಿನಲ್ಲಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಸಮಾವೇಶಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 5 ರಂದು ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಯಲಿದೆ.
ಆದ್ರೆ ಇದಕ್ಕೆ ಕಾಂಗ್ರೆಸ್ ನಲ್ಲೇ (Congress) ಅಪಸ್ವರ ಕೇಳಿಬಂದಿದೆ. ಪಕ್ಷದ ಹೆಸರು ಪಕ್ಕಕ್ಕಿಟ್ಟು ಅನ್ಯ ಸಂಘಟನೆಗಳ ಹೆಸರಿನಲ್ಲಿ ಸಮಾವೇಶ ಮಾಡಲು ಮುಂದಾದ ಕಾರಣ, ಹೈಕಮಾಂಡ್‌ಗೆ ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳು ಈ ಬಗ್ಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಚಿಹ್ನೆಯ ಅಡಿ ಕಾರ್ಯಕ್ರಮ ಆಯೋಜನೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿ ಅಂತ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷರಿಗೆ (AICC President) ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ರೀತಿ ಉಳಿದ ನಾಯಕರು ಕೂಡ ವಯಕ್ತಿಕ ಲಾಭಕ್ಕೆ ಪಕ್ಷ ಬಳಸಿಕೊಂಡ್ರೆ ಮುಂದೆ ಕಾಂಗ್ರೆಸ್ ಪಕ್ಷದ ಭವಿಷ್ಯ ಏನಾಗಬಹುದು? ಅಂತ ಎಐಸಿಸಿ ಅಧ್ಯಕ್ಷರಿಗೆ ಕಾಂಗ್ರೆಸ್ ಪದಾಧಿಕಾರಿಗಳು ಪತ್ರ ಬರೆದಿದ್ದಾರೆ.