• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ : ಹೈಕಮಾಂಡ್‌ಗೆ “ಕೈ” ಶಾಸಕರು ಪತ್ರ ಬರೆದಿದ್ದೇಕೆ..?

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ : ಹೈಕಮಾಂಡ್‌ಗೆ “ಕೈ” ಶಾಸಕರು ಪತ್ರ ಬರೆದಿದ್ದೇಕೆ..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿಯ ನಡುವೆಯೇ ಕಾಂಗ್ರೆಸ್ ಶಾಕರು ರೆಬಲ್‌ ಆಗಿದ್ದಾರೆ. ಮೊದಲ ಬಾರಿಗೆ ಆಯ್ಕೆಯಾದವರು ಹಾಗೂ ಹಿರಿಯ ಶಾಸಕರು  ಪಕ್ಷದ ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದಿದ್ದು ಸಂಚಲನ ಸೃಷ್ಟಿಸಿದೆ.

ADVERTISEMENT
BY Vijayendra On CM Siddaramaiah | ತಮ್ಮ ಕುರ್ಚಿ ಅಲ್ಲಾಡುವಾಗ ಸಮಾಜ ನೆನಪಾಗುತ್ತೆ #pratidhvani

ಪ್ರಮುಖವಾಗಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಿಡಿದೆದ್ದಿರುವ ಶಾಸಕರು ನೇರವಾಗಿ ರಾಹುಲ್‌ ಗಾಂಧಿ, ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರಿಗೆ ಪತ್ರ ಬರೆದು ಹಲವು ಅಂಶಗಳನ್ನು ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಎಲ್ಲ ರಾಜ್ಯಗಳಲ್ಲಿ ಮೊದಲ ಬಾರಿ ಆಯ್ಕೆಯಾದದವರೇ ಮಂತ್ರಿಗಳಾಗಿದ್ದಾರೆ..

ಸಂಪುಟ ಪುನರ್‌ ರಚನೆಯ ವಿಚಾರದಲ್ಲಿ ಹೈಕಮಾಂಡ್‌ನ ವಿಳಂಬಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಯುವ ಶಾಸಕರಿಗೆ ಅದರಲ್ಲೂ ಮೊದಲ ಬಾರಿಗೆ ಚುನಾಯಿತರಾಗಿರುವವರಿಗೆ ಸಂಪುಟದಲ್ಲಿ ಅವಕಾಶ ನೀಡಿ. ಯುವಕರಿಗೆ ಆದ್ಯತೆ ನೀಡುವುದನ್ನು ಗಮನಿಸಬೇಕು. ಇದು ಮುಂಬರುವ ಚುನಾವಣೆಗೆ ಸಹಕಾರಿಯಾಗಲಿದೆ. ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು. ಎಲ್ಲ ರಾಜ್ಯಗಳ ಸರ್ಕಾರಗಳಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಯುವ ಶಾಸಕರು ಮಂತ್ರಿಗಳಾಗಿದ್ದಾರೆ. ಹೀಗಾಗಿ ಕನಿಷ್ಠ ಐದು ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಶಾಸಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ :

ಕಾಂಗ್ರೆಸ್‌ನಿಂದ ಮೊದಲ ಬಾರಿಗೆ 38 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯುವಕರಿಗೆ ಅವಕಾಶ ನೀಡುವುದು ಈ ಕ್ಷಣದ ಬೇಡಿಕೆಯಾಗಿದೆ. ಶಾಸಕರಾದ ಎ.ಎಸ್.ಪೊನ್ನಣ್ಣ, ಭೀಮಸೇನ ಚಿಮ್ಮನಕಟ್ಟಿ, ಪ್ರದೀಪ್​ ಈಶ್ವರ್, ಇಕ್ಬಾಲ್​ ಹುಸೇನ್, ಎನ್​.ಟಿ.ಶ್ರೀನಿವಾಸ, ಅಶೋಕ್ ಕುಮಾರ್ ರೈ, ಎನ್​.ಶ್ರೀನಿವಾಸ, ದರ್ಶನ್ ಧ್ರುವನಾರಾಯಣ, ಶಿವಗಂಗಾ ಬಸವರಾಜು, ವಿಶ್ವಾಸ್ ವೈದ್ಯ, ನಾರಾ ಭರತ್ ರೆಡ್ಡಿ, ಪ್ರಕಾಶ್ ಕೋಳಿವಾಡ, ಕೆ.ಎಸ್.ಆನಂದ, ಮಂಥರ್ ಗೌಡ, ಚನ್ನಾರೆಡ್ಡಿ ಪಾಟೀಲ್, ದೇವೇಂದ್ರಪ್ಪ. ಡಿ.ರವಿಶಂಕರ್, ನಯನಾ ಮೋಟಮ್ಮ, ರಾಜಾವೇಣುಗೋಪಾಲ ನಾಯಕ, ಮಹೇಂದ್ರ ತಮ್ಮಣ್ಣನವರ್, ಎ.ಸಿ.ಶ್ರೀನಿವಾಸ, ಅಶೋಕ್ ಮನಗೂಳಿ, ಪಿ.ರವಿಕುಮಾರ್, ಬಾಬಾಸಾಹೇಬ್ ಪಾಟೀಲ್ ಸೇರಿ 31 ಶಾಸಕರು ಪತ್ರ ಬರೆದಿದ್ದಾರೆ.

ಸುರ್ಜೇವಾಲಾ ರಾಜ್ಯದಲ್ಲಿರುವಾಗಲೇ ಹೊಸ ದಾಳ..?

ಇನ್ನೂ ಪ್ರಮುಖವಾಗಿ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬರೆಯಲಾಗಿರುವ ಪತ್ರದಲ್ಲಿ ಕಾಂಗ್ರೆಸ್‌ ಶಾಸಕರು ಹಲವು ಮನವಿಗಳನ್ನು ಮಾಡಿದ್ದಾರೆ. ಆದರೆ ಡಿಸೆಂಬರ್‌ ತಿಂಗಳಿನಲ್ಲಿ ಬರೆದು ಸಹಿಹಾಕಿ ಹೈಕಮಾಂಡ್‌ ನಾಯಕರಿಗೆ ನೀಡಲಾಗಿತ್ತು. ಆದರೆ ಆ ಪತ್ರ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯದಲ್ಲಿ ಇರುವಾಗಲೇ ಬಹಿರಂಗವಾಗಿದೆ. ಇದು ಕಾಂಗ್ರೆಸ್‌ ಪಕ್ಷದಲ್ಲಿಯೇ ಹೊಸ ರಾಜಕೀಯ ದಾಳ ಉರುಳಿಸಲು ಕಾಂಗ್ರೆಸ್‌ ನಾಯಕರು ಮಾಡಿಕೊಂಡಿರುವ ತಂತ್ರಗಾರಿಕೆಯೇ ಎನ್ನುವ ಪ್ರಶ್ನೆಯು ಉದ್ಭವಿಸಿದೆ.

Tags: Cabinet ExpanssionCM SiddaramaiahcongressCongress High Commandcongress karnatakacongress mlasDCM DK ShivakumarK C VenugopalKarnataka GovernmentKarnataka PoliticsNewly Elected MLAsPRADEEP ESHWARPratidhvaniRahul GandhiRanadeep singh s
Previous Post

Accident: ‘ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬ**’: ಕಾರಣವೇನು..?

Next Post

ಕೇಂದ್ರ ಸರ್ಕಾರ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ- ಸಿಎಂ ಸಿದ್ದರಾಮಯ್ಯ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಕೇಂದ್ರ ಸರ್ಕಾರ  ಜನರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ- ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಜನರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ- ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada