• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in Uncategorized
0
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Share on WhatsAppShare on FacebookShare on Telegram

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ ನಡೆದ 24 ಗಂಟೆಗಳಲ್ಲೇ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 9 ಆರೋಪಿಗಳ ಪೈಕಿ 8 ಮಂದಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಕೈಫ್ ಪರಾರಿಯಾಗಿದ್ದಾನೆ. ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.

ADVERTISEMENT
Tamil Nadu Polls : திமுகவின் திட்டங்கள் மக்களின் வாழ்க்கையை மாற்றியுள்ளன..!

ಪೊಲೀಸ್ ತನಿಖೆಯಲ್ಲಿ ಈ ಹತ್ಯೆಗೆ ಹಳೆಯ ವೈಷಮ್ಯ ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳೇ ಪ್ರಮುಖ ಕಾರಣವೆಂದು ಬೆಳಕಿಗೆ ಬಂದಿದೆ. ಮುಖ್ಯ ಆರೋಪಿ ಮಹಮ್ಮದ್ ಶಾ ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈತನೊಂದಿಗೆ ಅರ್ಬಾಜ್ ಹಂಚಿನಮನಿ ಹಾಗೂ ರೌಡಿ ಶೀಟರ್ ಮುಕ್ತುಂ ಸೊಗಲದ್ ಸೇರಿದಂತೆ ಹಲವರು ಕೈಜೋಡಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಾದ ಆರೋಪಿಗಳಲ್ಲಿ ಸದ್ದಾಂ, ಗೌಸ್ ಮತ್ತು ಪರ್ವೇಜ್ ಸೇರಿದ್ದಾರೆ. ಕೊಲೆಗಿಂತ ಮುನ್ನ ಎಲ್ಲಾ ಆರೋಪಿಗಳು ಸಭೆ ನಡೆಸಿ ಫೈರೋಜ್ ಪಠಾಣ್ ಹತ್ಯೆಗೆ ಸಂಚು ರೂಪಿಸಿದ್ದರೆಂದು ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರದಲ್ಲಿ "ಹಂದೂರು ಗ್ರಾಮದಿಂದ N.R.ಪುರಕ್ಕೆ  ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆ

ಘಟನೆಯ ದಿನ ಸಂಜೆ ಫೈರೋಜ್ ಪಠಾಣ್ ತಮ್ಮ ಮನೆಯಲ್ಲಿ ಇದ್ದಾಗ ಆರೋಪಿಗಳು ಮನೆಗೆ ಬಂದು ದಾಳಿ ನಡೆಸಿದ್ದಾರೆ. ಮೊದಲು ಮಹಮ್ಮದ್ ಶಾ ಚಾಕುವಿನಿಂದ ಇರಿದು ದಾಳಿ ನಡೆಸಿದ್ದು, ಬಳಿಕ ಇತರರು ಒಳಗೆ ನುಗ್ಗಿ ಹಲ್ಲೆ ಮುಂದುವರಿಸಿ ಹತ್ಯೆಗೈದಿದ್ದಾರೆ. ನಂತರ ಮೃತರ ಮೊಬೈಲ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಅದನ್ನು ಧಾರವಾಡ ತಾಲೂಕಿನ ವೆಂಕಟಾಪುರ ಸಮೀಪ ಎಸೆದು ಹೋಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

Siddaramaiah: ಕೇಂದ್ರ ಸರ್ಕಾರಕ್ಕೆ ಸವಾಲ್ ಹಾಕಿದ ಸಿಎಂ ಸಿದ್ದರಾಮಯ್ಯ..! #pratidhvani #siddaramaiah

ಫೈರೋಜ್ ಪಠಾಣ್ ಅವರಿಗೆ ಏಪ್ರಿಲ್ 24 ರಂದು ಮದುವೆ ನಿಶ್ಚಿತವಾಗಿದ್ದ ಹಿನ್ನೆಲೆ, ಇತ್ತೀಚೆಗೆ ಮನೆಗೆ ಬೇಗ ಬರುತ್ತಿದ್ದರೆಂದು ಹೇಳಲಾಗುತ್ತಿದೆ. ಇದೇ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಆರೋಪಿಗಳು ದಾಳಿ ನಡೆಸಿದ್ದರೆಂದು ಪೊಲೀಸರು ಶಂಕಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಇನ್ನೂ ಯಾರಾದರೂ ಭಾಗಿಯಾಗಿರುವ ಸಾಧ್ಯತೆಯ ಕುರಿತು ಪರಿಶೀಲನೆ ನಡೆಯುತ್ತಿದೆ.

Tags: arrested accusedCrime News Karnatakacriminal conspiracy.Fairoz Pathan MurderKarnataka Crime NewsMohammed ShahMurder CasePersonal Rivalrypolice investigationpratidavaniReal Estate Disputerowdy sheeterSuburban Police
Previous Post

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

Next Post

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

Related Posts

ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾ**, 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ
Uncategorized

ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾ**, 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

by ಪ್ರತಿಧ್ವನಿ
August 27, 2026
0

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹ ದೇಶವನ್ನು ಬೆಚ್ಚಿಬೀಳಿಸಿದೆ. ಕೆಲವೇ ಗಂಟೆಗಳಲ್ಲಿ ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ರಸುವಾ...

Read moreDetails
“ವಿದ್ಯಾವಂತರೇ ಜಾತಿ ವ್ಯವಸ್ಥೆ, ಮೌಢ್ಯ ಬೆಳೆಸುವುದು ದುರದೃಷ್ಟಕರ” — ಸಿದ್ದರಾಮಯ್ಯ

“ವಿದ್ಯಾವಂತರೇ ಜಾತಿ ವ್ಯವಸ್ಥೆ, ಮೌಢ್ಯ ಬೆಳೆಸುವುದು ದುರದೃಷ್ಟಕರ” — ಸಿದ್ದರಾಮಯ್ಯ

August 26, 2026
ಇದು ಕನ್ನಡದ ರಂಗಸ್ಥಳ! ಕುತೂಹಲ ಮೂಡಿಸಿದ ಟೀಸರ್

ಇದು ಕನ್ನಡದ ರಂಗಸ್ಥಳ! ಕುತೂಹಲ ಮೂಡಿಸಿದ ಟೀಸರ್

August 22, 2026
ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?

ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?

August 20, 2026
ʻಪ್ರೇಮದ ಊರಲಿʼ ಸಿನಿಮಾ ಹಾಡು ರಿಲೀಸ್‌ ಆಯ್ತು…

ʻಪ್ರೇಮದ ಊರಲಿʼ ಸಿನಿಮಾ ಹಾಡು ರಿಲೀಸ್‌ ಆಯ್ತು…

August 20, 2026
Next Post
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್‌ ಎಲ್ಲಿದ್ದಾರೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada