• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in ಕರ್ನಾಟಕ
0
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
Share on WhatsAppShare on FacebookShare on Telegram

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ ಮಟ್ಟದ ಜನಾಂದೋಲನ ಆರಂಭಿಸುವುದಾಗಿ ಎಚ್ಚರಿಸಿದರು.

ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಯಲ್ಲಿ ಸರ್ಕಾರ ಗೊಂದಲ ಸೃಷ್ಟಿಸಿ ಅನ್ಯಾಯ ಮಾಡುತ್ತಿದೆ ಎಂದು ದೂರಿದರು. “ಯಾರಾದರೂ ಕೋರ್ಟ್‌ಗೆ ಹೋಗಲಿ, ವಿಚಾರ ನಿಂತುಹೋಗಲಿ ಎಂಬ ಮನೋಭಾವದಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ. ಜನರ ಆಕ್ರೋಶವನ್ನು ಹೋರಾಟವಾಗಿ ರೂಪಾಂತರಿಸುತ್ತೇವೆ,” ಎಂದು ಹೇಳಿದರು.

ADVERTISEMENT

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಪರಿಶಿಷ್ಟ ಜಾತಿಗೆ ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ.3ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಒಟ್ಟು ಶೇ.25 ಮಾಡಲಾಗಿತ್ತು. ಸರ್ವಪಕ್ಷಗಳ ಒಪ್ಪಿಗೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದರು.

ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ಡಾ. ಎಚ್ ಎನ್ ನಾಗಮೋಹನ್ ದಾಸ್ ಸಮಿತಿ ವರದಿ ಐದು ಗುಂಪುಗಳ ಶಿಫಾರಸು ಮಾಡಿದ್ದರೂ, ಸರ್ಕಾರ ರಾಜಕೀಯ ಲಾಭಕ್ಕಾಗಿ ಮೂರು ಗುಂಪುಗಳಿಗೆ ಸೀಮಿತಗೊಳಿಸಿ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದರು.

Rishab shetty : ರಾಯರ ಸನ್ನಿಧಿಯಲ್ಲಿ ಜಗ್ಗೇಶ್ ಎಂತಾ ಮಾತು ಹೇಳಿದ್ರು #pratidhvani

ರಾಜ್ಯಪಾಲರನ್ನು ಭೇಟಿ ಮಾಡಿ ಶೇ.17ಕ್ಕೆ ಸಹಿ ಪಡೆದುಕೊಂಡು ಬಂದಿದ್ದರೂ, ನ್ಯಾಯಾಲಯ ತಡೆ ಇದೆ ಎಂಬ ಕಾರಣ ಹೇಳುವುದು ಸರಿಯಲ್ಲ. ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಇದು ಅನ್ಯಾಯವಾಗಿದೆ ಎಂದು ಹೇಳಿದರು. “ಒಳಮೀಸಲಾತಿ ಜಾರಿ ಮಾಡದಿದ್ದರೆ ಸರ್ಕಾರ ಉಳಿಯುವುದಿಲ್ಲ,” ಎಂದು ಎಚ್ಚರಿಸಿದರು.

ಈ ವೇಳೆ ಮಾಜಿ ಸಚಿವ ಬಿ ಶ್ರೀರಾಮುಲು ಮಾತನಾಡಿ, ಬಿಜೆಪಿ ಸರ್ಕಾರ ಮೀಸಲಾತಿ ಜಾರಿಯಲ್ಲಿ ಸಂವಿಧಾನಬದ್ಧವಾಗಿ ನಡೆದುಕೊಂಡಿತ್ತು. ನಾಗಮೋಹನ್ ದಾಸ್ ವರದಿಗೆ ಸರ್ವಪಕ್ಷಗಳ ಅಭಿಪ್ರಾಯ ಪಡೆದು ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಂಡಿದ್ದೆವು ಎಂದು ತಿಳಿಸಿದರು.

Narendra Modi : ಭಯೋತ್ಪಾದಕತೆಯನ್ನು ನಿರ್ಮೂಲನೆ ಮಾಡಲು ಭಾರತ ಹೋರಾಡುತ್ತಿದೆ ..!

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಜನರನ್ನು ವಂಚಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ತಿಳಿಸಿದರು.

ಸಭೆಯಲ್ಲಿ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಸಂಸದ ಮುನಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: BJPcongressnarayanswami chalavadipratidavaniReservation
Previous Post

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

Next Post

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!