• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್‌ ಮತ್ತು ನಮ್ಮ ಕುಟುಂಬದ ವಿರುದ್ಧ ಒಳಸಂಚು: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
October 26, 2021
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಕುಲಗೆಟ್ಟ ರಾಜಕೀಯ ಮಾಡುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಜೆಡಿಎಸ್‌ ಬೆಳವಣಿಗೆಯನ್ನು ಸಹಿಸಲಾಗದೇ ಉಪ ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್‌ ನಾಯಕರು ಒಳಸಂಚು ಮಾಡಿ ನಮ್ಮ ಕುಟುಂಟ ಮತ್ತು ಜೆಡಿಎಸ್‌ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

ADVERTISEMENT

ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಹೆಚ್ಡಿಕೆ; ತಮ್ಮ ವಿರುದ್ಧ ಟೀಕೆ ಟಿಪ್ಪಣಿ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಜಮೀರ್‌ ಅಹ್ಮದ್‌ ಮೇಲೆ ವಾಗ್ದಾಳಿ ನಡೆಸಿರಲ್ಲದೆ ಸಿದ್ದರಾಮಯ್ಯ ನನ್ನ ಬಗ್ಗೆ ನೇರವಾಗಿ ಮಾತನಾಡಲಾಗದೇ ಇನ್ನೊಬ್ಬರ ಮೂಲಕ ಮಾತನಾಡಿಸುತ್ತಿದ್ದಾರೆಂದು ದೂರಿದ್ದಾರೆ.

ರಾಜ್ಯದಲ್ಲಿ ನಡೆದ ಆಪರೇಷನ್‌ ಕಮಲ, ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು ಹಾಗೂ ಜಾತ್ಯತೀತ ಶಕ್ತಿಗಳು ದುರ್ಬಲವಾಗಿ ಬಿಜೆಪಿ ಪುಟಿದೇಳಲು ಸಿದ್ದರಾಮಯ್ಯ ಅವರೇ ನೇರ ಕಾರಣ; ರಾಜ್ಯದಲ್ಲಿ ಬಿಜೆಪಿ ಈ ಪ್ರಮಾಣದಲ್ಲಿ ಬೆಳೆಯಲು ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಆರೋಪಿಸಿದ್ದಾರೆ.

ಜತೆಗೆ; ತಮ್ಮ ಬಗ್ಗೆ ಕೀಳಾಗಿ ಟೀಕಿಸಿರುವ ಜಮೀರ್‌ ಅಹ್ಮದ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ; ಕೊಚ್ಚೆ ಮೇಲೆ ಕಲ್ಲು ಹಾಕಿ ಮೈಮೇಲೆ ಕೆಸರು ಹಾಕಿಕೊಳ್ಳಲಾರೆ ಎಂದು ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ ಕೊಟ್ಟ ಸೂಟ್‌ʼಕೇಸ್‌ ಪಡೆದವರು ಯಾರು?

2008-13ರ ನಡುವಿನ ರಾಜಕೀಯ ಬೆಳವಣಿಗೆಗಳನ್ನು ಒಮ್ಮೆ ಮೆಲುಕು ಹಾಕಿ. ಆಪರೇಷನ್‌ ಕಮಲದ ಮೂಲಕ ತೆರವಾದ ಇಪ್ಪತ್ತು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಾಗ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಒಳಸಂಚು ರೂಪಿಸಿದ್ದರು. ಆಗ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಿಗೆ ಹಿನ್ನಡೆಯಾಗಿ ಎಲ್ಲಡೆ ಬಿಜೆಪಿಯೇ ಗೆದ್ದಿತ್ತು ಎಂದು ಹೆಚ್‌ಡಿಕೆ ಹೇಳಿದ್ದಾರೆ.

ತಮ್ಮ ಆತ್ಮೀಯ ಸ್ನೇಹಿತರೊಬ್ಬರನ್ನು ಯಡಿಯೂರಪ್ಪ ಅವರ ಬಳಿಗೆ ಕಳಿಸಿ ಸಿದ್ದರಾಮಯ್ಯ ಎಷ್ಟು ಕೋಟಿ ಪಡೆದುಕೊಂಡರು ಎಂಬುದು ಗೊತ್ತಿದೆ. ನನ್ನ ಬಗ್ಗೆ ಸೂಟ್‌ʼಕೇಸ್‌ ಆರೋಪ ಮಾಡಿಸುತ್ತಾರಲ್ಲಾ? ಇಪ್ಪತ್ತು ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಎಷ್ಟು ಕಡೆ ಗೆದ್ದಿತು ಆಗ? ಆಗ ಬಿಜೆಪಿ ಗೆಲುವಿನಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಬಹಳ ದೊಡ್ಡದು. ಯಡಿಯೂರಪ್ಪ ಅವರಿಂದ ಅವರು ಕೋಟ್ಯಂತರ ರೂಪಾಯಿ ಪಡೆದರು. ಯಾರು ಯಡಿಯೂರಪ್ಪ ಅವರ ಬಳಿ ಹೋಗಿ ಹಣ ತೆಗೆದುಕೋಂಡು ಬಂದರೋ ಅವರೇ ನನ್ನ ಬಳಿ ಈ ವಿಷಯವನ್ನು ಹತ್ತಾರು ಸಲ ಹೇಳಿದ್ದಾರೆ. ಎಷ್ಟು ಹಣ ತಂದಿವೀ ಅಂತ ಕೂಡ ಹೇಳಿದ್ದಾರೆ. ನಾನು ಜಾತ್ಯತೀತ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರ ನಿಜವಾದ ಜಾತ್ಯತೀತ ಬಣ್ಣ ಇದು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

2013ರಲ್ಲಿ ಕೇವಲ 40 ಸೀಟು ಪಡೆದಿದ್ದ ಬಿಜೆಪಿ ಅದೇ 2018ರಲ್ಲಿ 105 ಸೀಟು ಪಡೆಯಲು ಸಾಧ್ಯವಾಗಿದ್ದು ಹೇಗೆ? ಅದಾದ ಮೇಲೆ ಅಧಿಕಾರಕ್ಕೆ ಬಂದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸಿದ್ದು ಯಾರು? ಭೈರತಿ ಬಸವರಾಜು, ಮುನಿರತ್ನ, ಸೋಮಶೇಖರ್‌ ಅವರಂಥ ನಿಷ್ಠರು ಬಿಜೆಪಿಗೆ ಹೋಗಿದ್ದು ಯಾಕೆ? ಅಂದಿನ ಸಚಿವ ಜಾರ್ಜ್‌ ಮತ್ತು ಭೈರತಿ ಬಸವರಾಜ್‌ ನಡುವಿನ ಗಲಾಟೆಯನ್ನು ಸಿಎಲ್‌ಪಿ ನಾಯಕರಾಗಿಯೂ ಸರಿ ಮಾಡಲಿಲ್ಲ ಯಾಕೆ? ಬೆಳಗಾವಿಯಲ್ಲಿ ರಮೇಶ್‌ ಜಾರಕಿಹೊಳಿಗೆ ಉಂಟಾದ ಅಸಮಾಧಾನವನ್ನು ಶಮನ ಮಾಡಲಿಲ್ಲ, ಕಾರಣವೇನು? ಎಂದು ಸಿದ್ದರಾಮಯ್ಯ ಮೇಲೆ ಗುಡುಗಿದ್ದಾರೆ.

ಕಾರ್ಯಾಗಾರ ಆದ ಮೇಲೆ ಜೆಡಿಎಸ್‌ ಪಕ್ಷವು ಜನರಿಗೆ ಹತ್ತಿರವಾಗುತ್ತಿದೆ ಮಾತ್ರವಲ್ಲದೆ, ಉಪ ಚುಣಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುತ್ತಿದೆ. ಇದನ್ನು ಸಹಿಸಿಕೊಳ್ಳುವುದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರಿಗೆ ಆಗುತ್ತಿಲ್ಲ. ಈ ಕಾರಣಕ್ಕೆ ನಮ್ಮ ಮೇಲೆ ಸೂಟ್‌ʼಕೇಸ್‌ ಆರೋಪ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.

ಆಡಿಯೋ ಬಿಡಲು ಸವಾಲು:

ಅವರು ನನ್ನ ಬಳಿ ಆಡಿಯೋ ಇದೆ ಎಂದು ಹೇಳಿದ್ದಾರಲ್ಲ, ಅದನ್ನು ಹೊರಗೆ ಬಿಡಲಿ. ಯಾವ ಯಾವ ಆಡಿಯೋಗಳು ಇವೆ ಎಂಬುದನ್ನು ಬಹಿರಂಗ ಮಾಡಲಿ ಎಂದು ಶಾಸಕ ಜಮೀರ್‌ಗೆ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇವರು ಈಗ ಫಾರೂಕ್‌ ಬಗ್ಗೆ ಮಾತನಾಡುತ್ತಿದ್ದಾರೆ, ಅದೇ ಫಾರೂಕ್‌ ಅವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಕಾಂಗ್ರೆಸ್‌ ಅಭ್ಯರ್ಥಿ ಕೆಸಿ ರಾಮಮೂರ್ತಿ ಅವರನ್ನು ಗೆಲ್ಲಿಸಲು ಮಾತೃಪಕ್ಷಕ್ಕೆ ದ್ರೋಹ ಮಾಡಿದವರು ಯಾರು? ಈಗ ರಾಮಮೂರ್ತಿ ಅವರು ಎಲ್ಲಿದ್ದಾರೆ? ಇದಕ್ಕೆ ಉತ್ತರ ನೀಡಲಿ ಎಂದು ಹೆಚ್‌ಡಿಕೆ ಚಾಟಿ ಬೀಸಿದ್ದಾರೆ.

ಹೌದು. ನಾನು ಕಸ ತೆಗೆಸುತ್ತಿದ್ದೆ. ಓದುವಾಗಲೇ ಈ ಕೆಲಸ ಮಾಡುತ್ತಿದ್ದೆ. ಇದರಲ್ಲಿ ಅವಮಾನ ಏನಿದೆ? ಆಮೇಲೆ ನಮ್ಮ ತಂದೆಯವರು ಬೇಡವೆಂದರು. ಆ ಕೆಲಸವನ್ನು ಅಲ್ಲಿಗೇ ಬಿಟ್ಟೆ. ಆಮೇಲೆ ಓದು ಮುಗಿದ ಮೇಲೆ ಸಿನಿಮಾ ಹಂಚಿಕೆದಾರನಾದೆ. ನಾನು ನನ್ನ ಸ್ವಂತ ದುಡಿಮೆಯಿಂದ ಮೇಲೆ ಬಂದಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Tags: BJPCongress PartyCovid 19JDSJDS Karnatakaಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಂದಗಿ ಉಪಚುನಾವಣೆ : ದೇವಸ್ಥಾನಕ್ಕೆ ಭೇಟಿ ನೀಡಿ, ಜನರ ಜೊತೆ ಮಾತನಾಡಿದ ಎಚ್.ಡಿ ಕುಮಾರ್‌ ಸ್ವಾಮಿ

Next Post

ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada