• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
March 11, 2024
in Top Story, ಕರ್ನಾಟಕ
0
ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು (Bengaluru): ಬಿಜೆಪಿಯವರಿಗೆ (BJP) ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ (Constitution) ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಸಂಸದ ಅನಂತಕುಮಾರ್ ಹೆಗಡೆಯವರು (Ananthkumar hegde) ಸಂವಿಧಾನ ಬದಲಾವಣೆಯ ಬಗ್ಗೆ ಪುನಃ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,‌ ಈ ಮುಂಚೆ ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತಾನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರಕ್ಕೆ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಅವರಿಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ‌‌ ಎಂದರು.

ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ನರೇಂದ್ರ ಮೋದಿಯವರು ( Narendra Modi) ತಮ್ಮ ಈ ಯೋಚನೆಯನ್ನು ಅನಂತಕುಮಾರ್ (Karnataka bjp MP) ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದರು.

ಸಂವಿಧಾನ ಬದಲಾವಣೆ ಇಂಗಿತ- ವೈಯಕ್ತಿಕ ಹೇಳಿಕೆ ಅಲ್ಲ

Bengaluru: Union MoS Skill Development and Entrepreneurship Anant Kumar Hegde addresses during the inauguration of ISH India 2018 in Bengaluru on Feb 22, 2018. (Photo: IANS)

ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಾಲಿ ಸಂಸದರಾಗಿರುವ ಹಿರಿಯ ನಾಯಕರಾದ ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕವಾಗುತ್ತದೆಯೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಲೋಕಸಭೆ ಚುನಾವಣೆಗೆ (Loksabha Election) ಕಾಂಗ್ರೆಸ್ (Congress) ಎರಡನೇ ಪಟ್ಟಿ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸ್ಕ್ರೀನಿಂಗ್ ಸಮಿತಿಯ ಸಭೆ ನಡೆಯುತ್ತಿದ್ದು, ಶಿಫಾರಸ್ಸುಗಳನ್ನು ಮಾಡಲಾಗುವುದು. ಇದರ ಬಗ್ಗೆ ತೀರ್ಮಾನವನ್ನು ರಾಷ್ಟ್ರೀಯ ಚುನಾವಣಾ ಸಮಿತಿಯು ಕೈಗೊಳ್ಳುತ್ತದೆ ಎಂದರು.

ಅನ್ನಭಾಗ್ಯ ಜಾರಿಗೆ ತರುವ ಆಹಾರ ಇಲಾಖೆಗೆ ಸ್ವಂತ ಕಟ್ಟಡ

ಆಹಾರ ಇಲಾಖೆಯ ಸ್ವಂತ ಕಟ್ಟಡ ನಿರ್ಮಿಸಿ, ಒಂದೇ ಸೂರಿನಡಿ ಇಲಾಖೆಯ ಎಲ್ಲ ಕಾರ್ಯಚಟುವಟಿಕೆಗಳು ನಡೆಸುವಂತೆ ಅನುಕೂಲವಾಗಲು ಇಂದು ಆಹಾರಸೌಧ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಆಹಾರ ಇಲಾಖೆಯಿಂದಲೇ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ಪ್ರಮುಖ ಇಲಾಖೆಗಳಲ್ಲೊಂದಾಗಿದೆ ಎಂದು ತಿಳಿಸಿದರು.

#karnataka #bengaluru #Constitution #ananthkumarhegde #siddaramaiah #congress #bjp #NarendraModi #bjp #AmitShah #IndianConstitution #LoksabhaElection #Congress #AnantkumarHegde #changeConstitution #KarnatakabjpMP

Previous Post

ಡಿ.ಕೆ.ಸುರೇಶ್ ಗೆ ಸರಿಯಾಗೆ ಖೆಡ್ಡಾ ತೋಡಿದ್ರಾ ಮೈತ್ರಿ ನಾಯಕರು ?! ಡಾ.ಮಂಜುನಾಥ್ ಸ್ಪರ್ಧೆ ಬಹುತೇಕ ಖಚಿತ ! 

Next Post

ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ !

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ !

ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada