ದೆಹಲಿ ಪೊಲೀಸರ ವಿಶೇಷ ಕೋಶವು ಮಂಗಳವಾರ ಪಾಕಿಸ್ತಾನ ಮೂಲದ ಭಯೋತ್ಪಾದಕನನ್ನು ನಗರದಲ್ಲಿ ಸೆರೆಹಿಡಿದಿದ್ದು, ದೆಹಲಿಯ ನವರಾತ್ರಿಯನ್ನು ಗುರಿಯಾಗಿಸಿಕೊಂಡು ದೊಡ್ಡ ಭಯೋತ್ಪಾದಕ ದಾಳಿ ನಡೆಸುವ ಉದ್ದೇಶವಿತ್ತು ಆದರೆ ಅದನ್ನು ದೆಹಲಿ ಪೋಲಿಸರು ತಪ್ಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಮೊಹಮ್ಮದ್ ಅಸ್ರಾಫ್ ಅಲಿಯಾಸ್ ಅಲಿ ಎಂದು ಗುರುತಿಸಲ್ಪಟ್ಟ ಭಯೋತ್ಪಾದಕನನ್ನು ಲಕ್ಷ್ಮಿ ನಗರದ ರಮೇಶ್ ಪಾರ್ಕ್ ಪ್ರದೇಶದಿಂದ ಬಂಧಿಸಲಾಗಿದೆ. ಆತ ದೆಹಲಿಯ ಶಾಸ್ತ್ರಿ ನಗರದಲ್ಲಿ ಭಾರತೀಯ ಪ್ರಜೆಯ ನಕಲಿ ಐಡಿಯೊಂದಿಗೆ ವಾಸಿಸುತ್ತಿದ್ದ ಎನ್ನಲಾಗಿದೆ.
ಒಂದು ಹೆಚ್ಚುವರಿ ಮ್ಯಾಗಜೀನ್ ಜೊತೆ 60 ಸುತ್ತು ಗಂಡುಗಳಿರೊ ಒಂದು ಎಕೆ -47 ರೈಫಲ್, ಒಂದು ಹ್ಯಾಂಡ್ ಗ್ರೆನೇಡ್, 50 ಸುತ್ತು ಗುಂಡುಗಳಿರೊ ಎರಡು ಅತ್ಯಾಧುನಿಕ ಪಿಸ್ತೂಲ್ ಗಳನ್ನು ಆತನ ವಶಕ್ಕೆ ಪಡೆಯಲಾಗಿದೆ.
ಮೂಲಗಳ ಪ್ರಕಾರ, ಅಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವನಾಗಿದ್ದಾನೆ. ಭಯೋತ್ಪಾದಕರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, ಸ್ಫೋಟಕ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳನ್ನು ಆತನೆ ಮೇಲೆ ಅನ್ವಯಿಸಲಾಗಿದೆ.

