
ರಾಜ್ಯ ದಲಿತ – ಹಿಂದುಳಿದ ಅಲ್ಪಸಂಖ್ಯಾತ ಸಮಿತಿಯಿಂದ ಸಂವಿಧಾನ ದಿನಾಚರಣೆ ಮಾಡಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮ ಮಾಡಲಾಗಿದೆ. ವಿಧಾನಸೌಧದಿಂದ ಫ್ರೀಡಂ ಪಾರ್ಕ್ವರೆಗೂ ಕಾಲ್ನಡಿಗೆ ಮೂಲಕ ಆಗಮಿಸಿದ ನಾಯಕರು, ಅಂಬೇಡ್ಕರ್‌ಗೆ ನಮನ ಸಲ್ಲಿಸಿದ್ರು. ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿಎಂ ಯಡಿಯೂರಪ್ಪ, ಶಾಸಕ ಶೈಲೇಂದ್ರ ಬೆಲದಾಳೆ, ಮಾಜಿ ಶಾಸಕರಾದ ವೈ.ಸಂಪಂಗಿ, ರೇಣುಕಾಚಾರ್ಯ, ಹರತಾಳ್ ಹಾಲಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ರು.

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ. ಸಂವಿಧಾನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವಿದ್ದೇವೆ. ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕನ್ನ ಸಂವಿಧಾನ ನಮಗೆ ಕೊಟ್ಟಿದೆ. ಸಂವಿಧಾನ ಮೌಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಎಲ್ಲರೂ ಸಂವಿಧಾನ ಮೌಲ್ಯ ಎತ್ತಿ ಹಿಡಿಯೋಣ ಅಂತ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಂಬೇಡ್ಕರ್ ಪಟ್ಟಿರೋ ಶ್ರಮದಿಂದ ನಾವು ಈಗ ಬದುಕ್ತಿದ್ದೇವೆ. ಮೀಸಲಾತಿ ನಮಗೆ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ಯಾವುದೇ ಸರ್ಕಾರ, ಪಕ್ಷ ಮೀಸಲಾತಿಯನ್ನ ಹಗುರವಾಗಿ ತೆಗೆದುಕೊಳ್ಳಬಾರದು. ಕಾಂಗ್ರೆಸ್ ಅಂಬೇಡ್ಕರ್ರನ್ನು ಗೌರವಿಸಿಯೇ ಇಲ್ಲ. ಈಗ ಅಂಬೇಡ್ಕರ್ ಫೋಟೋ ಹಿಡಿದುಕೊಂಡು ಓಡಾಡ್ತಿದ್ದಾರೆ ಅಂತ ಟೀಕಿಸಿದ್ದಾರೆ.
ಕೊಳ್ಳೇಗಾಲ ಮಾಜಿ ಶಾಸಕ ಮಹೇಶ್ ಮಾತನಾಡಿ, ಬಾಬಾ ಸಾಹೇಬರು ನಮಗೆ ದೇವರ ಸಮಾನ. ಅದೇ ಕಾರಣಕ್ಕೆ ನಾವು ಪಲ್ಲಕ್ಕಿಯಲ್ಲಿ ಕರೆತಂದು ಪೂಜೆ ಮಾಡ್ತಿದ್ದೇವೆ. ಕಾಂಗ್ರೆಸ್ ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ದ್ರೋಹ ಮಾಡಿದೆ. ಬಾಬಾ ಸಾಹೇಬರು ತೀರಿಕೊಂಡಾಗ ಶವಸಂಸ್ಕಾರಕ್ಕೂ ಜಾಗ ಕೊಡಲಿಲ್ಲ ಅಂತ ಕಿಡಿ ಕಾರಿದ್ದಾರೆ.












