• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ಕಣ್ಣೀರಿಟ್ಟ ಅನಿತಾ ಕುಮಾರಸ್ವಾಮಿ…

ಪ್ರತಿಧ್ವನಿ by ಪ್ರತಿಧ್ವನಿ
November 25, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ.

ADVERTISEMENT

ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.

ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ. ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.

ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು.

ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು.

ಧನ್ಯವಾದಗಳು

-ಶ್ರೀಮತಿ ಅನಿತಾ ಕುಮಾರಸ್ವಾಮಿ

Tags: Anitha KumarswamyBJPChannapattana By ElectionCongress Partyhd kumarswamyNIkhil Kumarswaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಬೇಟಿ ನೀಡಿದ ಲಕ್ಷ್ಮಣ ಸವದಿ

Next Post

ಬಿಗ್ ಬಾಸ್ ಮನೆಯಲ್ಲಿ ಮಂಜು ಹವ ಬಲು ಜೋರು- ಹಳ್ಳಿ ಹೈದನ ಕಾಮಿಡಿ ಸೂಪರ್.!

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಬಿಗ್ ಬಾಸ್ ಮನೆಯಲ್ಲಿ ಮಂಜು ಹವ ಬಲು ಜೋರು- ಹಳ್ಳಿ ಹೈದನ ಕಾಮಿಡಿ ಸೂಪರ್.!

ಬಿಗ್ ಬಾಸ್ ಮನೆಯಲ್ಲಿ ಮಂಜು ಹವ ಬಲು ಜೋರು- ಹಳ್ಳಿ ಹೈದನ ಕಾಮಿಡಿ ಸೂಪರ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada