ಬೆಂಗಳೂರು: ಬೆಂಗಳೂರಿನಲ್ಲಿ 190 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಎಂಟು ಕಂಪನಿಗಳು ಈ ಯೋಜನೆ ಕೈಗೊಳ್ಳಲು ಅರ್ಹತೆ ಪಡೆದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ತಿಳಿಸಿದ್ದಾರೆ.
“ಈ ಕಂಪನಿಗಳು ಕಾರ್ಯಸಾಧ್ಯತೆಯ ವರದಿಯನ್ನು ಸಲ್ಲಿಸುತ್ತಿವೆ ಮತ್ತು ನಾವು 45 ದಿನಗಳಲ್ಲಿ ಸಾರ್ವಜನಿಕ ಟೆಂಡರ್ ಕರೆಯಲು ತಯಾರಿ ನಡೆಸುತ್ತಿದ್ದೇವೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ 0ಮಾತನಾಡಿದ ಡಿಸಿಎಂ, ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕಾರಿಡಾರ್ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ ಎಂದರು.ಹಲವರು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ರಸ್ತೆ ಮೂಲಸೌಕರ್ಯ, ಟ್ರಾಫಿಕ್ ಜಾಮ್ ತೆರವು, ಸುರಂಗ ರಸ್ತೆ ನಿರ್ಮಾಣ ಮತ್ತು ರಸ್ತೆ ವಿಸ್ತರಣೆ ಬಗ್ಗೆಯೂ ಸಲಹೆಗಳು ಬಂದಿವೆ.
ಇನ್ನು ಸುರಂಗ ಮಾರ್ಗ ಯೋಜನೆಗೆ ಬಂಡವಾಳ ಖಾತ್ರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದೆವು. ಈ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಬಿಡ್ಡಿಂಗ್ ನಡೆದಿದ್ದರಿಂದ ಒಂಬತ್ತು ಕಂಪನಿಗಳು ಯೋಜನೆಗೆ ಆಸಕ್ತಿ ವ್ಯಕ್ತಪಡಿಸಿವೆ. ಡಿಕೆ ಶಿವಕುಮಾರ್ ವಿವರಿಸಿದ್ದಾರೆ.
ಸುರಂಗ ರಸ್ತೆಯು ಚತುಷ್ಪಥವಾಗಬೇಕೋ ಅಥವಾ ಷಟ್ಪಥವಾಗಬೇಕೋ ಎಂಬ ಬಗ್ಗೆ ನಿರ್ಧಾರವಾಗಬೇಕಿದೆ. ಅದು ಎಲ್ಲಿ ಪ್ರಾರಂಭವಾಗಬೇಕು ಮತ್ತು ಎಲ್ಲಿ ಕೊನೆಗೊಳ್ಳಬೇಕ. ಮಧ್ಯದಲ್ಲಿ ಪ್ರವೇಶ ಮತ್ತು ನಿರ್ಗಮನಗಳನ್ನು ಬೆಂಗಳೂರಿನಾದ್ಯಂತ ವಿಸ್ತರಿಸಬೇಕು. ಇದನ್ನು ಒಂದು ಅಥವಾ ಎರಡು ದಿನಗಳಲ್ಲಿ ಮಾಡಲಾಗುವುದಿಲ್ಲ. ಈ ನಿಟ್ಟಿನಲ್ಲಿ ಕಂಪನಿಗಳು ಅಧ್ಯಯನ ನಡೆಸಿ ವರದಿ ಸಲ್ಲಿಸಲಿವೆ ಎಂದು ಡಿಸಿಎಂ ತಿಳಿಸಿದರು.