• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ:ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
December 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು.

ADVERTISEMENT

ಗೋಕುಲ ರಸ್ತೆಯ ಗೋಕುಲ ಗಾರ್ಡನ್‌‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಧಾರವಾಡ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಣೆ, ಧನ ಸಹಾಯದ ಮಂಜೂರಾತಿ ಆದೇಶದ ಚೆಕ್ ವಿತರಣೆ, ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರ ಧನ ಸಹಾಯದ ಚೆಕ್ ಮತ್ತು ನೋಂದಣಿ ಪ್ರಮಾಣ ಪತ್ರಗಳ ವಿತರಣೆ ಹಾಗೂ ವಿವಿಧ ಕಾರ್ಮಿಕ ಕಾಯ್ದೆಗಳಡಿ ಕಾರ್ಮಿಕರಿಗೆ ಮಂಜೂರಾದ ಆದೇಶದ ಚೆಕ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದಲ್ಲಿ 82 ರಿಂದ 85 ರಷ್ಟು ಅಸಂಘಟಿತ ಕಾರ್ಮಿಕರು ಇದ್ದಾರೆ. ಅದರಲ್ಲಿ 25 ವರ್ಗಗಳ ಅಸಂಘಟಿತ ವಲಯಗಳನ್ನು ಗುರುತಿಸಲಾಗಿದೆ. ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲಾಗುತ್ತಿದೆ. 35 ಲಕ್ಷ ಅಸಂಘಟಿತ ಕಾರ್ಮಿಕರನ್ನು ಗುರುತಿಸಲಾಗಿದೆ. ಗಿಗ್ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳನ್ನು ಒದಗಿಸಲಾಗುವುದು. ಕಟ್ಟಡ ನಿರ್ಮಾಣ ಕಾರ್ಮಿಕರ ಮಂಡಳಿ ಹತ್ತು ಸಾವಿರ ಕೋಟಿ ತೆರಿಗೆ ಮೂಲಕ ಸಂಗ್ರಹ ಮಾಡಲಾಗುತ್ತಿದೆ. ತೆರಿಗೆ ಸಂಗ್ರಹವನ್ನು ಹೆಚ್ಚಳ ಮಾಡಲು ಕ್ರಮ ವಹಿಸಲಾಗುತ್ತದೆ ಎಂದು ಅವರು ತಿಳಿಸಿದರು.

ದೇಶದಲ್ಲಿ ಗ್ಯಾರಂಟಿ ಯೋಜನೆಗಳು ಮಾದರಿ:

ದೇಶದಲ್ಲಿ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ. ಇತ್ತೀಚೆಗೆ ಯುರೋಪ್ ಪ್ರವಾಸ ಕೈಗೊಂಡಾಗ ಸಹ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದೇನೆ. ಬಡವರ ಕಲ್ಯಾಣಕ್ಕಾಗಿ ವರ್ಷಕ್ಕೆ ಸುಮಾರು 60 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. 5 ವರ್ಷಕ್ಕೆ ಸರಿಸುಮಾರು 3 ಲಕ್ಷ ಕೋಟಿ ವ್ಯಯವಾಗಲಿದೆ. ಜನಪರ ಕಾಳಜಿ ಹೊಂದಿರುವ ಸರ್ಕಾರ ನಮ್ಮದು. ಜನಪರ ಸರ್ಕಾರಕ್ಕೆ ಜನರು ಸಹಕಾರ ನೀಡಬೇಕು ಎಂದರು.

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ:ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಕಟ್ಟಡ ಕಾರ್ಮಿಕರಿಗೆ ಮನೆ ನಿರ್ಮಿಸಲು ಭೂಮಿ ಗುರುತಿಸಲಾಗಿದೆ. 7 ಎಕರೆ ಪ್ರದೇಶದಲ್ಲಿ ಸುಮಾರು 2500 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿ, ಕಟ್ಟಡ ಕಾರ್ಮಿಕರಿಗೆ ಹಸ್ತಾಂತರ ಮಾಡಲಾಗುವುದು. ಆ ಮೂಲಕ ಕಾರ್ಮಿಕರಿಗೆ ಸೂರು ಕಲ್ಪಿಸಿದಂತಾಗುತ್ತದೆ ಎಂದರು.

ಕಾಲಕಾಲಕ್ಕೆ ಕಾರ್ಮಿಕರ ಕಾರ್ಡ್ ನವೀಕರಣ ಮಾಡಿಕೊಳ್ಳಿ:

ರಾಜ್ಯದಲ್ಲಿ 56 ಲಕ್ಷ ಕಾರ್ಮಿಕ ಕಾರ್ಡ್ ನೋಂದಣಿ ಮಾಡಲಾಗಿದೆ. ಇದರಲ್ಲಿ 20 ಲಕ್ಷ ನಕಲಿ ಕಾರ್ಡ್ ಹೊಂದಿರುವುದು ಕಂಡು ಬಂದಿದೆ. ಹೀಗಾಗಿ 20 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಅರ್ಹ ಫಲಾನುಭವಿಗಳ ಕಾರ್ಡ್ ರದ್ದಾಗಿರುವುದರ ಬಗ್ಗೆ ಮಾಹಿತಿ ನೀಡಿದರೆ, ಮರಳಿ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು.ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ದೊರೆಯುವಂತಾಗಬೇಕು. 43 ವಲಯಗಳಲ್ಲಿ ಕಾರ್ಮಿಕರ ವಾಹನ ತೆರಳಿ ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಾಗುವುದು.ಕಾರ್ಮಿಕರನ್ನು ಜಿಐಎಸ್ ಮೂಲಕ ಮ್ಯಾಪಿಂಗ್ ಮಾಡಲಾಗುವುದು. ಕಾಲಕಾಲಕ್ಕೆ ಅರ್ಹ ಕಾರ್ಮಿಕರು ತಮ್ಮ ಕಾರ್ಡ್‌ಗಳನ್ನು ನವೀಕರಿಸಿಕೊಳ್ಳಬೇಕು ಎಂದು ಸಚಿವರು ಕಾರ್ಮಿಕರಲ್ಲಿ ಮನವಿ ಮಾಡಿದರು.

ಹೊರಗುತ್ತಿಗೆ ನೌಕರರ ನೇಮಕಕ್ಕೆ ಸೊಸೈಟಿ ರಚನೆ:

ವಿವಿಧ ಇಲಾಖೆಗಳಲ್ಲಿ ಸಾವಿರಾರು ಜನರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಏಜೆನ್ಸಿ ಕಂಪನಿಗಳು ನಿಗದಿತ ಅವಧಿಯಲ್ಲಿ ಸಂಬಳ ನೀಡುವಲ್ಲಿ ವಿಳಂಬ ಮಾಡುತ್ತವೆ. ಹೀಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡಲಾಗುವುದು. ಪ್ರಾಯೋಗಿಕವಾಗಿ ಮೂರು ಜಿಲ್ಲೆಗಳಲ್ಲಿ ರಚನೆ ಮಾಡಿ, ತದನಂತರದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸೊಸೈಟಿ ರಚಿಸಲಾಗುವುದು ಎಂದು ಹೇಳಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಜಂಟಿ ನಿರ್ದೇಶಕರಾದ ಸಂಗಪ್ಪ ಉಪಾಸೆ, ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಸ್.ಆರ್.ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: 7 acresConstruction of 2500 housesDistrict Collector Divya Prabhu GRJDistrict Level Guarantee Schemes Implementation Committee Chairman S.R. PatilaDistrict Superintendent of Police Dr. Gopal BakodaHubliKarnataka Building and Other Construction Workers Welfare Board Joint Director Sangappa UpaseLabor and District In-charge Minister Santosh LadLabor Department.
Previous Post

ಕಾರ್ಮಿಕ ಇಲಾಖೆಯ ಕಾರ್ಯಕ್ರಮಕ್ಕೆ ಹರಿದು ಬಂದ ಜನಸಾಗರ:ನೊಂದಣಿಗೆ ನೂಕುನುಗ್ಗಲು..!

Next Post

‘ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಎಂದರೆ ನಾನೇ ಸಿಎಂ ಆಗ್ತೀನಿ’:ಯತ್ನಾಳ್

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post

'ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಎಂದರೆ ನಾನೇ ಸಿಎಂ ಆಗ್ತೀನಿ':ಯತ್ನಾಳ್

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada