• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ : ಸಿ.ಎಂ.ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
May 23, 2026
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ
0
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Share on WhatsAppShare on FacebookShare on Telegram

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT
DK Shivakumar on Siddaramaiah : ವೇದಿಕೆಗೆ ಖಡಕ್‌ ಎಂಟ್ರಿ ಕೊಟ್ಟ DCM ಡಿಕೆ ಶಿವಕುಮಾರ್‌..! #siddaramaiah

ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಜಂಟಿಯಾಗಿ ಸೂರ್ಯಗ್ರಾಮದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಶಂಕುಸ್ಥಾಪನೆ, ಮುಖ್ಯಮಂತ್ರಿಗಳ “ನಮ್ಮ ಮನೆ” ಯೋಜನೆಗೆ ಚಾಲನೆ, ಸೂರ್ಯಶೈನ್, ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳ ಶಂಕುಸ್ಥಾಪನೆ, ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರಿಗೆ ಸಾಂಕೇತಿಕ ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿಯವರೆಗೂ ಕೇವಲ ವಸತಿ ನಿರ್ಮಾಣ ಮಾಡುತ್ತಿದ್ದ ವಸತಿ ಇಲಾಖೆ ಮತ್ತು ಕರ್ನಾಟಕ ಗೃಹ ಮಂಡಳಿ ಈಗ 80 ಸಾವಿರ ಆಸನ ವ್ಯವಸ್ಥೆಯ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದು ಪ್ರಗತಿಯ ದೂರದೃಷ್ಟಿಯಾಗಿದೆ . ಇದಕ್ಕಾಗಿ ಶಾಸಕ ಶಿವಲಿಂಗೇಗೌಡ ಮತ್ತು ಜಮೀರ್ ಅಹಮದ್ ಖಾನ್ ಅಭಿನಂದನಾರ್ಹರು ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ : ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ಗುಜರಾತ್ ನಲ್ಲಿರುವ ಕ್ರೀಡಾಂಗಣ 90 ಸಾವಿರ ಆಸನ ವ್ಯವಸ್ಥೆ ಇರುವಂಥದ್ದು. ನಮ್ಮ ರಾಜ್ಯದ್ದು ಎರಡನೇ ದೊಡ್ಡ ಕ್ರೀಡಾಂಗಣವಾಗಿದೆ. ಇದರಿಂದ ಪ್ರವಾಸೋದ್ಯಮದ ಪ್ರಗತಿಯ ಜೊತೆಗೆ ಸುತ್ತ ಮುತ್ತಲ ಊರುಗಳ ಆರ್ಥಿಕತೆಯೂ ಹೆಚ್ಚುತ್ತದೆ. ಉದ್ಯೋಗವೂ ಬೆಳೆಯುತ್ತದೆ. ಸರ್ಕಾರದ ಆರ್ಥಿಕ ನೆರವಿಲ್ಲದೆ (KHB) ಕರ್ನಾಟಕ ಗೃಹ ಮಂಡಳಿಯ ಹಣದಿಂದಲೇ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂಬ ಮಾತನ್ನು ಶಿವಲಿಂಗೇಗೌಡ ತಿಳಿಸಿದ್ದಾರೆ ಎಂದು ಸಿಎಂ ಉಲ್ಲೇಖಿಸಿದ್ದಾರೆ.

ಖಾಲಿ ಇರುವ ಗೃಹ ಮಂಡಳಿ ನಿವೇಶನಗಳ ಮಾರಾಟದಿಂದ ಗೃಹ ಮಂಡಳಿಗೆ 20ಸಾವಿರ ಕೋಟಿ ಆದಾಯ ಬರುವ ಅಂದಾಜಿದೆ. ನೆತ್ತಿ ಮೇಲೆ ಸೂರು ಇರಬೇಕು ಎನ್ನುವುದು ಪ್ರತಿಯೊಬ್ಬರ ಆಸೆ. ಈಗ ಭೂಮಿ ಬೆಲೆ ಹೆಚ್ಚುತ್ತಿರುವುದರಿಂದ ಬಡ, ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕರ್ನಾಟಕ ಗೃಹ ಮಂಡಳಿಯು ನಿವೇಶನಗಳನ್ನು ನಿರ್ಮಿಸಿ ಒದಗಿಸುತ್ತಿದೆ  ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Savukku Shankar: ಜೈಲಿನಿಂದ ಬಿಡುಗಡೆ ಬಳಿಕ ಸ್ಟಾಲಿನ್‌ ವಿರುದ್ಧ ಯುಟ್ಯೂಬರ್‌ ಸಾವುಕ್ಕು ಶಂಕರ್ ವಾಗ್ದಾಳಿ..!

ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಜಿಗಣಿ ಹೋಬಳಿಯ ಪ್ರಮುಖ ಸಂಪರ್ಕ ರಸ್ತೆ ನಿರ್ಮಾಣಕ್ಕೂ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಧಿಕಾರಿಗಳು ಈ ಕೆಲಸವನ್ನೂ ಆರಂಭಿಸುತ್ತಾರೆ. ಕ್ರೀಡಾಂಗಣ, ರಸ್ತೆ ಮಾತ್ರವಲ್ಲದೆ ವಸತಿ ಇಲಾಖೆ ವತಿಯಿಂದ ಈ ಬಾರಿ ಇಲ್ಲಿಯವರೆಗೂ 3 ಲಕ್ಷಕ್ಕೂ ಹೆಚ್ಚು ಮನೆ ಮತ್ತು ನಿವೇಶನಗಳನ್ನೂ ರಾಜ್ಯದಲ್ಲಿ ನೀಡಲಾಗಿದೆ. ಹೀಗಾಗಿ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಗೆ ನಾವು ನಾಂದಿ ಹಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ವಸತಿ ಸಚಿವ ಜಮೀರ್ ಅಹಮದ್, ಕೆಹೆಚ್ ಬಿ ಅಧ್ಯಕ್ಷ ಹಾಗೂ ಶಾಸಕ ಶಿವಲಿಂಗೇಗೌಡ, ಶಾಸಕ ಆನೇಕಲ್ ಶಿವಣ್ಣ, ಹಿರಿಯ ಶಾಸಕರುಗಳಾದ ಟಿ.ಬಿ.ಜಯಚಂದ್ರ, ಕೃಷ್ಣಪ್ಪ, ಮಾಜಿ ಸಂಸದ ಡಿ.ಕೆ.ಸುರೇಶ್, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಸಕ ಅಬ್ಬಯ್ಯ, MLC ರಾಮೋಜಿಗೌಡ, ಗ್ಯಾರಂಟಿ ಅನುಷ್ಠಾನ ಸಮುತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: 2Nd Biggest Cricket Stadiumb. z. zameer ahmed khanCM Siddaramaiahcongress karnatakaCricket stadiumDK ShivakumarIndian Cricket MatchesIPL Matchesk m shivalinge gowdaKarnataka GovernmentKarnataka Housing Board
Previous Post

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada