ಬೀದರ್:ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು ಈ ಹಿನ್ನಲೆಯಲ್ಲಿ ಇಂದು ಬೀದರ್ ಜಿಲ್ಲೆಗೆ ಸಿಐಡಿ ತಂಡ ಭೇಟಿ ನೀಡಲಿದೆ.
ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ CID ತನಿಖೆಗೆ ವಹಿಸಿರುವುದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ CID ಎಸ್‌ಪಿ ಸುಲೇಮಾನ್ ತಹಶೀಲ್ದಾರ್ ನೇತೃತ್ವದ ತನಿಖಾ ತಂಡ ಇಂದು ಬೀದರ್‌ಗೆ ಭೇಟಿ ನೀಡುತ್ತಿದೆ.ಸಚಿನ್ ನಿವಾಸಕ್ಕೆ ತೆರಳಿ ಅವರ ಕುಟುಂಬ ಸದಸ್ಯರ ಹೇಳಿಕೆಯನ್ನು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.ಇನ್ನು ಸಚಿನ್ ಸಹೋದರಿ ಸುರೇಖಾ ಅವರು ರಾಜ್ಯ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದು, ಹಾಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಈ ಕುರಿತು ಪತ್ರ ಬರೆಯಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.