ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದು. ಈ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ.
ಹೌದು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ. ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದೆ. ಸಿಸಿಟಿವಿ ವೀಡಿಯೋ, ಆಡಿಯೋ, ಮೊಬೈಲ್ ಸಂದೇಶ, ಬ್ಯಾಂಕ್ ದಾಖಲೆ, ಗುತ್ತಿಗೆ ವಿವರ, ಕುಟುಂಬಸ್ಥರು, ಸ್ನೇಹಿತರ ಹೇಳಿಕೆಯನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿ ನೀಡಲಾಗಿದೆ. ಈಶ್ವರಪ್ಪ ಕಡೆಯವರಿಂದ ಬೆದರಿಕೆ ಬಂದಿದೆ ಎಂಬುದಕ್ಕೆ ಯಾವುದೇ ದಾಖಲೆಗಳ ಇಲ್ಲ ಎಂದು ಕ್ಲೀನ್ ಚಿಟ್ ನೀಡಲಾಗಿದೆ.
ಈಶ್ವರಪ್ಪ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಏಪ್ರಿಲ್ 11ರಂದು ಉಡುಪಿಯ ಲಾಡ್ಜಿನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದರು. ಪ್ರಕರಣಲ್ಲಿ ಈಶ್ವರಪ್ಪ ಹೆಸರು ಕೇಳಿ ಬಂದ ಹಿನ್ನೆಲೆ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದರು.