ಸಾಲಬಾದೆಯಿಂದ ಗುತ್ತಿಗೆದಾರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೇವರಾಯನದುರ್ಗದ ಅತಿಥಿಗೃಹದಲ್ಲಿ ನಡೆದಿದೆ.
ಮಧುಗಿರಿ ತಾಲ್ಲೂಕಿನ ಸಪ್ತಗಿರಿ ಬಡಾವಣೆಯ ನಿವಾಸಿ ಟಿ.ಎನ್.ಪ್ರಸಾದ್(50) ಎಂದು ಗುರುತಿಸಲಾಗಿದೆ ಸಾಲದ ಸುಳಿಯಲ್ಲಿ ಸಿಲುಕಿದ್ದರು ಮತ್ತು ಮಾಡಿದ್ದ ಸಾಲವನ್ನ ಹಿಂತಿರುಗಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸರ್ಕಾರ ಗುತ್ತಿಗೆದಾರ ಪ್ರಸಾದ್‌ಗೆ ಅನೇಕ ಕಾಮಗಾರಿಗಳ ಬಿಲ್ ಬಾಕಿ ಪಾವತಿ ಉಳಿಸಿಕೊಂಡಿದ್ದ ಕಾರಣ ಬೇರೆಡೆ ಸಾಲ ತಂದು ಗುತ್ತಿಗೆ ಮಾಡಿಸಿದ್ದರು ಎಂದು ವರದಿಯಾಗಿದೆ ಇದು ಅವರ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಮೃತಪಟ್ಟ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ.
ಈಗಾಗಲೇ ಗುತ್ತಿಗೆದಾರರಿಂದ 40% ಕಮಿಷನ್ ಸರ್ಕಾರ ಎಂಬ ಹಣೆಪಟ್ಟಿ ಮಾಸುವ ಮುನ್ನವೇ ಮಧುಗಿರಿಯಲ್ಲಿ ಗುತ್ತಿಗೆದಾರನ ಆತ್ಮಹತ್ಯೆ ವಿರೋಧ ಪಕ್ಷಗಳಿಗೆ ಎಡೆ ಮಾಡಿಕೊಟ್ಟಂತಾಗಿದೆ.