ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣರನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ರಾಷ್ಟ್ರ – ರಾಜ್ಯ ರಾಜಕೀಯದಲ್ಲಿ ತೀವ್ರ ಸದ್ದು ಮಾಡಿದ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.
ಸಚಿವ ಮುನಿರತ್ನ ಸೇರಿದಂತೆ ಹಲವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದ ಕೆಂಪಣ್ಣ ವಿರುದ್ಧ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಅರ್ಜಿ ವಿಚಾರಣೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ಸೇರಿದಂತೆ 19 ಮಂದಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿತ್ತು ಅದರಂತೆ 19 ಮಂದಿ ಆರೋಪಿತರು ನ್ಯಾಯಾಲಯಕ್ಕೆ ಹಾಜರಾಗದಿರುವುದಕ್ಕೆ ನ್ಯಾಯಾಲಯ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿತ್ತು.
ಅದರಂತೆ ಸಂಘದ ಅಧ್ಯಕ್ಷ ಕೆಂಪಣ್ಣ, ಉಪಾಧ್ಯಕ್ಷ ವಿ.ಕೃಷ್ಣ ರೆಡ್ಡಿ, ಖಜಾಂಚಿ ಹೆಚ್. ಎಸ್. ನಟರಾಜ್, ಸಂಘಟನಾ ಕಾರ್ಯದರ್ಶಿ ಗುರು ಸಿದ್ದಪ್ಪರನ್ನು ಬಂಧಿಸಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಕೋರಮಂಗಲದ ನಿವಾಸದಲ್ಲಿ ವಿಚಾರಣೆ ನಡೆಸಿದನ್ಯಾಯಾಧೀಶರು ಸೋಮವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ನಾಲ್ವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.











