• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ; ಅಡ್ಯಾ‌ ನಲ್ಲಿ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ರೌಡಿಗಳ ಸೆರೆ

Any Mind by Any Mind
September 29, 2023
in Top Story, ಕರ್ನಾಟಕ
0
ಅಕ್ರಮ ಜಾನುವಾರು ಸಾಗಾಟ ವಿಚಾರದಲ್ಲಿ ವೈಷಮ್ಯ; ಅಡ್ಯಾ‌ ನಲ್ಲಿ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರು ಕುಖ್ಯಾತ ರೌಡಿಗಳ ಸೆರೆ
Share on WhatsAppShare on FacebookShare on Telegram

ಮಂಗಳೂರು: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಈ ಹಿಂದೆ ಕೊಲೆ, ಕೊಲೆಯತ್ನ ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ

ADVERTISEMENT

ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಅಮ್ಮಮ್ಮಾರ್ ನಿವಾಸಿಗಳಾದ ತಸ್ಲಿಮ್ @ ಗರುಡ ತಸ್ಲಿಮ್(34), ಹೈದರಾಲಿ @ ಹೈದು(26) ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿರುತ್ತದೆ.

ಹತ್ತು ದಿನಗಳ ಹಿಂದಷ್ಟೆ ಜೈಲಿನಿಂದ ಬಿಡುಗಡೆ

ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ, ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳ ಪೈಕಿ ತಸ್ಲಿಮ್ @ ಗರುಡ ತಸ್ಲಿಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ, 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

Tags: crimemangloreNewsrowdies
Previous Post

ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್‍ನ ‘ಸಲಾರ್’

Next Post

ಅಂಧ ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಚಿನ್ನದ ಪದಕ ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ CMಸಿದ್ದರಾಮಯ್ಯ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಅಂಧ ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಚಿನ್ನದ ಪದಕ ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ CMಸಿದ್ದರಾಮಯ್ಯ

ಅಂಧ ಐ.ಬಿ.ಎಸ್.ಎ ವಿಶ್ವ ಕ್ರಿಕೆಟ್ ಚಿನ್ನದ ಪದಕ ಗೆದ್ದವರಿಗೆ ಅಭಿನಂದನೆ ಸಲ್ಲಿಸಿದ CMಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada