• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಪ್ರತಿ ಶನಿವಾರ 'ನನ್ನ ಇ- ಖಾತೆ' ಅಭಿಯಾನ : ಡಿಕೆ ಶಿವಕುಮಾರ್‌ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
May 16, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..
Share on WhatsAppShare on FacebookShare on Telegram

ಬೆಂಗಳೂರು : ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನದಿಂದ ಬೆಂಗಳೂರಿನ ಸಾರ್ವಜನಿಕರು ಒಂದೇ ಒಂದು ರೂಪಾಯಿ ಲಂಚ ನೀಡದೆ ತಮ್ಮ ಆಸ್ತಿಗಳನ್ನು ‘ಬಿ’ ಖಾತೆಯಿಂದ ‘ಎ’ ಖಾತೆಗೆ ಪರಿವರ್ತನೆ ಹಾಗೂ ಮನೆ ಬಾಗಿಲಲ್ಲೇ ಇ-ಖಾತೆ ಪಡೆಯಬಹುದು. ಏಳು ಲಕ್ಷ ಜನರಿಗೆ ಇದರಿಂದ ಉಪಯೋಗವಾಗಲಿದೆ. ಬೆಂಗಳೂರು ನಿವಾಸಿಗಳು, ಅರ್ಜಿದಾರರು ಈ ಅಭಿಯಾನದಿಂದ ಖುಷಿಯಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ADVERTISEMENT
Narendra Modi : ನಮ್ಮ ಸಂಸ್ಕೃತಿಯನ್ನು ನೀವು ಇಲ್ಲಿಯೂ ಬೆಳೆಸುತ್ತಿರೋದು ನನಗೆ ಸಂತೋಷ ತಂದಿದೆ..! #pratidhvani

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶನಿವಾರ ಆರಂಭವಾದ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನ ಕೇಂದ್ರಕ್ಕೆ ಭೇಟಿ ನೀಡಿ, ಪ್ರಕ್ರಿಯೆಯನ್ನು ಪರಿಶೀಲಿಸಿ ನಾಗರಿಕರ ಅಹವಾಲು ಆಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಖಾತೆ ದಾಖಲೆಯಲ್ಲಿ ಫೋಟೋ ಸಹ ಇರಲಿದೆ. ಯಾರಾದರೂ ನಕಲಿ ದಾಖಲೆಗಳನ್ನು ನೀಡಿ ಖಾತೆ ಮಾಡಿಸಿಕೊಂಡರೆ ಅದನ್ನು ರದ್ದು ಮಾಡುವ ವ್ಯವಸ್ಥೆಯೂ ಇದೆ. ನಿಗದಿತ ನಂಬರ್ ನೀಡಿದ ತಕ್ಷಣ 2004 ರ ನಂತರದ ಎಲ್ಲಾ ದಾಖಲೆಗಳು ದೊರೆಯುತ್ತವೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಲಿಂಕ್ ಮಾಡಲಾಗಿದೆ. ಅರ್ಹ ಮಾಲೀಕರಿಗೆ ಖಾತೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಶನಿವಾರ ನನ್ನ ಇ- ಖಾತೆ ಅಭಿಯಾನ..

ನಿಮ್ಮ ಆಸ್ತಿ ಮೌಲ್ಯಗಳನ್ನು ಹೆಚ್ಚಳ ಮಾಡಲು ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಮಾಡಿಕೊಡಲಾಗುತ್ತಿದೆ. ಇದು ಐತಿಹಾಸಿಕ ತೀರ್ಮಾನ. ಇದರಿಂದ ನೀವು ಬ್ಯಾಂಕ್ ನಲ್ಲಿ ಸಾಲ ಪಡೆಯಬಹುದು ಹಾಗೂ ಇತರೇ ಸೌಲಭ್ಯಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಬೆಂಗಳೂರಿನಲ್ಲಿರುವ 23 ಲಕ್ಷ ಆಸ್ತಿಗಳಲ್ಲಿ 16 ಲಕ್ಷ ಎ ಖಾತೆಗಳಿದ್ದರೆ 7 ಲಕ್ಷ ಬಿ ಖಾತೆಗಳಿವೆ. ಕೆಳ ಮಟ್ಟದ ಅಧಿಕಾರಿಗಳು ಖಾತೆ ವಿಚಾರವಾಗಿ ಲಂಚ ಪಡೆದು ಕಿರುಕುಳ ನೀಡುತ್ತಿದ್ದರು ಎನ್ನುವುದು ನನ್ನ ಗಮನಕ್ಕೆ ಬಂದಿತ್ತು. ಅದಕ್ಕಾಗಿ ಪ್ರತಿ ಶನಿವಾರ ಅಭಿಯಾನ ನಡೆಯಲಿದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ : “ಕೇವಲ 7 ನಿಮಿಷದಲ್ಲಿ ಕ್ಯಾನ್ಸರ್ ಚಿಕಿತ್ಸೆ : ಭಾರತದಲ್ಲಿ ಹೊಸ ಇಂಜೆಕ್ಷನ್ ಬಿಡುಗಡೆ”

ನಿಮ್ಮ ಆಸ್ತಿ ದಾಖಲೆಗಳಲ್ಲಿ ತೊಂದರೆಯಿದ್ದರೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಿದ್ದಾರೆ. ನಿಮ್ಮ ಆಸ್ತಿಗಳಿಗೆ ಗುರುತಿನ ಸಂಖ್ಯೆ ನೀಡಲಾಗಿರುತ್ತದೆ. ಇದನ್ನು ಬಳಸಿಕೊಂಡು ತಪ್ಪಿರುವ ದಾಖಲೆಗಳನ್ನು ಸರಿ ಮಾಡಲಾಗುವುದು. ನಿಮ್ಮ ಆಸ್ತಿ ಮೌಲ್ಯದ ಶೇ. 5 ರಷ್ಟು ಮೊತ್ತವನ್ನು ಕಟ್ಟಬೇಕಿತ್ತು. ಆದರೆ 100 ದಿನಗಳ ಕಾಲ ರಿಯಾಯಿತಿ ನೀಡಿದ್ದು ಶೇ. 2 ರಷ್ಟು ಶುಲ್ಕ ಪಾವತಿ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದು ಸಾರ್ವಜನಿಕರಿಗೆ ಸುವರ್ಣಾವಕಾಶ. ನಿಮ್ಮ ಖಾತೆಯನ್ನು ನಾವೇ ಫೈಲ್ ರೂಪದಲ್ಲಿಯೇ ನೀಡುತ್ತೇವೆ. ಅದರಲ್ಲಿ ನಿಮ್ಮ ಹಾಗೂ ಮನೆಯ ಫೋಟೋ ಇರುತ್ತದೆ. ಆನ್ ಲೈನ್ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಯಾರೂ ಸಹ ಇದನ್ನು ನಕಲು ಮಾಡಲು ಸಾಧ್ಯವಿಲ್ಲ ಎಂದು ಡಿಕೆ ಶಿವಕುಮಾರ್‌ ಅಭಯ ನೀಡಿದ್ದಾರೆ.

ಸಾರ್ವಜನಿಕರು ಯಾರಿಗೂ ಸಹ ಒಂದೇ ಒಂದು ರೂಪಾಯಿ ಲಂಚ ನೀಡಬಾರದು. ಅಧಿಕಾರಿಗಳಿಗೆ ಸೇರಿದಂತೆ ಯಾವ ಪಕ್ಷದವರಿಗೂ ಲಂಚ ಕೊಡಬಾರದು. ಸರ್ಕಾರಿ ಭೂಮಿಗಳನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ನಾವು ಇಡೀ ದೇಶದಲ್ಲಿಯೇ ಮಾದರಿಯಾಗಿದ್ದೇವೆ. ಕೇಂದ್ರ ಸರ್ಕಾರವು ನಮಗೆ ಒಳ್ಳೆ ಕೆಲಸ ಮಾಡುತ್ತಿದ್ದೀರಿ ಎಂದು ಶ್ಲಾಘಿಸಿದೆ. ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ. ನೀವು ತೆಗೆದುಕೊಂಡ ನಿವೇಶನ ಅಂದು ಕಡಿಮೆ ಬೆಲೆಯದ್ದಾಗಿದ್ದರೆ ಖಾತೆ ಬದಲಾವಣೆಯಿಂದ ಆಸ್ತಿ ಬೆಲೆ ಹೆಚ್ಚಳವಾಗಲಿದೆ ಎಂದು ಹೊಸ ಕನಸು ಚಿಗುರುವಂತೆ ಮಾಡಿದ್ದಾರೆ.

ದಲ್ಲಾಳಿಗಳನ್ನು ದೂರ ಇಡಬೇಕು. ಯಾವ ಅಧಿಕಾರಿಗಳು ಲಂಚ ಕೇಳಿದರೆ ದೂರು ನೀಡುವ ವ್ಯವಸ್ಥೆ ಮಾಡಬೇಕು. ಇದಕ್ಕಾಗಿ ನಿರ್ದಿಷ್ಟ ದೂರವಾಣಿ ಸಂಖ್ಯೆ ನೀಡಲಾಗುವುದು. ಲಂಚ ಕೇಳಿದ್ದರ ದೂರು ನೀಡಬಹುದು. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಸಿದ್ದಾರೆ.

Tags: B KhataBBMPbjp karnatakaCongress GovernmentCorruption Freedcm karnatakaDK ShivakumarE khataGBAGovernment OfficialsGreator Benglore AuthorityKarnataka GovernmentLAnd Guarantee SchemePratidhvaniRevenue Deparatment
Previous Post

“ಕೇವಲ 7 ನಿಮಿಷದಲ್ಲಿ ಕ್ಯಾನ್ಸರ್ ಚಿಕಿತ್ಸೆ : ಭಾರತದಲ್ಲಿ ಹೊಸ ಇಂಜೆಕ್ಷನ್ ಬಿಡುಗಡೆ”

Next Post

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
“ಕೇವಲ 7 ನಿಮಿಷದಲ್ಲಿ ಕ್ಯಾನ್ಸರ್ ಚಿಕಿತ್ಸೆ : ಭಾರತದಲ್ಲಿ ಹೊಸ ಇಂಜೆಕ್ಷನ್ ಬಿಡುಗಡೆ”

“ಕೇವಲ 7 ನಿಮಿಷದಲ್ಲಿ ಕ್ಯಾನ್ಸರ್ ಚಿಕಿತ್ಸೆ : ಭಾರತದಲ್ಲಿ ಹೊಸ ಇಂಜೆಕ್ಷನ್ ಬಿಡುಗಡೆ”

May 16, 2026
ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

ವಿಜಯ್ ಗೆಲುವಿನ ಪ್ರಭಾವ ಉತ್ತರ ಪ್ರದೇಶಕ್ಕೂ? ‘ಸತ್ತಾ ಪರಿವರ್ತನ್ ಯಾತ್ರೆ’ಗೆ ಸಜ್ಜಾದ ಚಂದ್ರಶೇಖರ್ ಆಜಾದ್

May 16, 2026
“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

“ಕಾರಿಗೆ ಬ್ರೇಕ್, ಮೆಟ್ರೋಗೆ ಗ್ರೀನ್ ಸಿಗ್ನಲ್ ಕೊಟ್ಟ ವಿಜಯೇಂದ್ರ”

May 16, 2026
Next Post
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada