ಮಂಗಳೂರು; ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುವ ಎನ್ ಐಎ ಪೊಲೀಸರು ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಮೇಲೆ ದಾಳಿ ನಡೆಸಿ ದಾಖಲೆಯನ್ನು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಎನ್ ಐಎ ವಶದಲ್ಲಿರುವ ಮಾಝ್ ಮುನೀರ್ ಇದೇ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದನು ಎನ್ನಲಾಗಿದ್ದು.ಇದರಿಂದ ದಾಖಲೆ ಪರಿಶೀಲನೆಗ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಿಂದ ಬಂದಿರುವ ಏಳು ಮಂದಿಯ ತಂಡ ತನಿಖೆ ನಡೆಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.







