ಬೆಂಗಳೂರು (Bengaluru) : ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಎಸ್‌ಸಿ/ಎಸ್‌ಟಿ (SC-ST) ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ರಾಜ್ಯದ ಅಪೆಕ್ಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕರಿಸಲಾಗಿದೆ.
ಈಗ 22 ಇರುವ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ಸಂಖ್ಯೆ ಇನ್ನು ಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಬಹುದು. ಎಸ್‌ಸಿ/ಎಸ್‌ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ.
ಕೆಲವು ಬಿಜೆಪಿ ಶಾಸಕರು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದರು. ಸರ್ಕಾರ ಸಹಕಾರಿ ಕ್ಷೇತ್ರವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಆದರೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು (KNRajanna), ಅಂತಿಮವಾಗಿ ಕೆಲವು “ಲೋಪದೋಷಗಳು” ಇದ್ದರೆ, ಸರಿಪಡಿಸಲಾಗುವುದು ಎಂದು ಭರವಸೆ ನೀಡಿ ಮಸೂದೆಯನ್ನು ಅಂಗೀಕರಿಸಿದರು.
#karnataka #knrajanna #congress #CooperativeSocieties(amendment)Bill #congressgovernment











