ಬೆಂಗಳೂರು : ಕಳೆದ ಎರಡು ತಿಂಗಳಿಂದ ಕ್ರಿಕೆಟ್ ಪ್ರೇಮಿಗಳಿಗೆ ಭರಪೂರ ಮನರಂಜನೆ ಒದಗಿಸಿದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇದೀಗ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಿದ್ಧಗೊಂಡಿದೆ.

1,30,000ಕ್ಕೂ ಹೆಚ್ಚು ಆಸನಗಳಿರುವ ಈ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಹೀಗಾಗಿ ಇಂದಿನ ಪಂದ್ಯಕ್ಕೆ ಎಲ್ಲ ರೀತಿಯ ಸಿದ್ದತೆಗಳು ನಡೆದಿವೆ. ಆದರೆ ಆರ್‌ಸಿಬಿ ಅಭಿಮಾನಿಗಳಿಗೆ ನಗರ ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ.
ಕಳೆದ 2025ರ ಜೂನ್ ನಲ್ಲಿ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು 33 ಜನರು ಗಾಯಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಹಾಗೂ ಆಯುಕ್ತರು ಖಡಕ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್ ಕೊಂಡಜ್ಜಿ ಒತ್ತಾಯ..
ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಸ್ತೆಗಳಲ್ಲಿ ಎಲ್‌ಇಡಿ ಪರದೆಗಳನ್ನು ಅಳವಡಿಸಬಾರದು. ಫೈನಲ್ ಪಂದ್ಯ ವೀಕ್ಷಿಸಲು ಮಾಲ್‌ಗಳು, ಪಬ್‌ಗಳು ಅಥವಾ ಇತರ ಸಂಸ್ಥೆಗಳ ಹೊರಗೆ ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಪರದೆಗಳನ್ನು ಅಳವಡಿಸಬಾರದು. ಪಟಾಕಿ ಸಿಡಿಸುವುದು ಮತ್ತು ಅಪಾಯಕಾರಿ ವಸ್ತುಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಶಾಂತಿ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸಲಹೆ ನೀಡಿದ್ದಾರೆ.






