ರಾಜ್ಯದಲ್ಲಿ ಇಂದು 104 ಜನರಿಗೆ ಕರೊನಾ ಸೋಂಕು (Corona virus) ದೃಢಪಟ್ಟಿದ್ದು, ಅದರಲ್ಲಿ ಬೆಂಗಳೂರಿ (Bengaluru) ನಲ್ಲಿಯೇ ಬರೊಬ್ಬರಿ 85 ಜನರಿಗೆ ಕೊರೊನಾ ಸೋಂಕು ಹರಡಿದೆ. ಕರೊನಾ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆ ಆಗಿದೆ.
ಬೆಂಗಳೂರಿನಲ್ಲಿ 85 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಚಾಮರಾಜನಗರ ಜಿಲ್ಲೆಯಲ್ಲಿ 2, ದಕ್ಷಿಣ ಕನ್ನಡದಲ್ಲಿ 1, ಮಂಡ್ಯ 1, ಮೈಸೂರು 7, ಶಿವಮೊಗ್ಗ 6, ತುಮಕೂರಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ.

ಕಳೆದ 24 ಗಂಟೆಯಲ್ಲಿ 8 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 5.93ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.