ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.3ಕ್ಕೆ ಹೆಚ್ಚಳವಾಗಿದ್ದು, ಸೋಂಕು ಪರೀಕ್ಷೆಗೊಳಪಟ್ಟ100 ಮಂದಿಯಲ್ಲಿ ಮೂವರಿಗೆ ಸೋಂಕು ದೃಢಪಡುತ್ತಿದೆ ಎಂದು ವರದಿಗಳು ಹೇಳುತ್ತಿವೆ.
ನಗರದಲ್ಲಿ ಸೋಮವಾರ 63 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 59 ಮಂದಿ ಗುಣಮುಖರಾದರೆ, ಯಾವುದೇ ಸಾವು ವರದಿಯಾಗಿಲ್ಲ. ಸೋಂಕು ಪರೀಕ್ಷೆಗಳು 2,130 ನಡೆದಿದ್ದು, ಪಾಸಿಟಿವಿಟಿ ದರ ಶೇ.3ರಷ್ಟುದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳು 6 ಏರಿಕೆಯಾಗಿವೆ.

14 ರಾಜ್ಯಗಳಲ್ಲಿ ಕೊರೋನಾ ಕೇಸ್ ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 2600 ಕೇಸ್, 35ಕ್ಕೂ ಹೆಚ್ಚು ಡೆತ್ ಆಗಿದೆ. ದೆಹಲಿ ಒಂದರಲ್ಲೇ ದಿನಕ್ಕೆ 1200ಕ್ಕೂ ಹೆಚ್ಚು ಕೇಸ್ ಪತ್ತೆಯಾಗಿದ್ದು, ರಾಷ್ಟ್ರ ರಾಜಧಾನಿಯ ಪಾಸಿಟಿವಿಟಿ ರೇಟ್ ಶೇ.6.42ಕ್ಕೆ ಏರಿಕೆಯಾಗಿದೆ.