ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,569 ಜನರಲ್ಲಿ ಹೊಸದಾಗಿ ಕರೋನ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆ ದಿಢೀರ್ ಕುಸಿತ ಕಂಡಿದೆ ಎನ್ನಬಹುದು.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 19 ಜನರು ಕರೋನಾಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,260 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 16,400 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,467 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 4,25,84,710 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ