• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಬಿಎಂಪಿ ಕರೋನಾ ಡೆತ್ ಆಡಿಟ್ ವರದಿ ಸಿದ್ಧ : ಈವರೆಗೆ ಕರೋನಾಗೆ ಬಲಿಯಾದವರೆಷ್ಟು ಗೊತ್ತೇ?

ಕರ್ಣ by ಕರ್ಣ
November 14, 2021
in ಕರ್ನಾಟಕ, ರಾಜಕೀಯ
0
ಬಿಬಿಎಂಪಿ ಕರೋನಾ ಡೆತ್ ಆಡಿಟ್ ವರದಿ ಸಿದ್ಧ : ಈವರೆಗೆ ಕರೋನಾಗೆ ಬಲಿಯಾದವರೆಷ್ಟು ಗೊತ್ತೇ?
Share on WhatsAppShare on FacebookShare on Telegram

ಜನರ ಜೀವ ಹಿಂಡಿ ಹಿಪ್ಪೆ ಮಾಡಿದ ಕೊರೋನಾಗೆ ಎಷ್ಟು ಮಂದಿ ಬಲಿಯಾಗಿದ್ದಾರೆ ಎಂಬ ಲೆಕ್ಕವನ್ನು ಬಿಬಿಎಂಪಿ ಸಿದ್ಧ ಮಾಡಿಕೊಂಡಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಈವರೆಗೆ ಸೇರಿದಂತೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಕೊರೋನಾ ಡೆತ್ ಆಡಿಟ್ ವರದಿಯನ್ನು ಪಾಲಿಕೆ ತಯಾರಿಸಿದೆ. ಅಲ್ಲದೆ ಈ ಸಾವುಗಳಿಗೆಲ್ಲಾ ಏನು ಪ್ರಮುಖ ಕಾರಣ ಎಂಬ ಟಿಪ್ಪಣಿಯನ್ನೂ ಉಲ್ಲೇಖಿಸಿದೆ.

ADVERTISEMENT

ಡೆಡ್ಲಿ ಕೊರೋನಾಗೆ ಈವರೆಗೆ ಬಲಿಯಾದವರೆಷ್ಟು.?

ಕೊರೋನಾ ಎರಡನೇ ಡೋಸ್ ಪಡೆಯಲು ಜನರಿಂದ ಹಿಂದೇಟು ಹಾಕುತ್ತಿದ್ದಾರೆ. ಇದರ ನಡುವೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಕೊರೋನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾವನ್ನಪ್ಪಿದ್ದವರ ಲೆಕ್ಕವನ್ನು ಪಾಲಿಕೆ ಸಿದ್ಧ ಮಾಡಿಕೊಂಡಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ನಿಜಕ್ಕೂ ಹೌಹಾರಿಸುವಂತಿದೆ. ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಡೆಡ್ಲಿ ಕೊರೋನಾ ಕಿತ್ತುಕೊಂಡಿದ್ದು 10 ಸಾವಿರಕ್ಕೂ ಅಧಿಕ ಜೀವಗಳನ್ನು ಎಂದರೆ ನಂಬಲೇ ಬೇಕು. ಅದರಲ್ಲೂ ಬೆಂಗಳೂರಿನಲ್ಲಿ 70 ವರ್ಷಕ್ಕಿಂತ ಮೇಲ್ಪಟ್ಟವರೇ ಹೆಚ್ಚಾಗಿ ಕೊರೋನಾಗೆ ಉಸಿರು ಚೆಲ್ಲಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 16,307 ಮಂದಿಯನ್ನು ಬಲಿ ಪಡೆದ ಕೊರೋನಾ.!!

ಬಿಬಿಎಂಪಿ ನಡೆಸಿರುವ ಕೊರೋನಾ ಡೆತ್ ಆಡಿಟ್ ನಲ್ಲಿ ಮೊದಲ ಮತ್ತು ಎರಡನೇ ಅಲೆಯಲ್ಲಿ ಕೊರೋನಾಗೆ 16,307 ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ. ಈ ಪೈಕಿ 4,480 ಮೊದಲ ಅಲೆಯಲ್ಲಿ ಹಾಗು 11,827 ಮಂದಿ ಎರಡನೇ ಅಲೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಪೈಕಿ 70 ವರ್ಷ ಮೇಲ್ಪಟ್ಟವರೇ ಹೆಚ್ಚಾಗಿ ಕೋವಿಡ್ ಕಬಂಧಬಾಹುವಿಗೆ ಸಿಕ್ಕಿ ಉಸಿರು ಕಳೆದುಕೊಂಡಿದ್ದಾರೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಒಟ್ಟಾರೆ 5,453 ಮಂದಿ 70 ವರ್ಷ ಮೇಲ್ಪಟ್ಟವರು ಸಾವನ್ನಪ್ಪಿದ್ದಾರೆ. ಈ ಪೈಕಿ ಪರುಷರೇ ಹೆಚ್ಚು.

ಜನರ ನಿರ್ಲಕ್ಷ್ಯ.. ತಡವಾಗಿ ಚಿಕಿತ್ಸೆ.. ಕೊರೋನಾ ಕೇಕೆ.!!

ಇನ್ನು ಇಷ್ಟೊಂದು ಮಂದಿಯ ಕೊರೋನಾ ಸಾವಿಗೆ ಪ್ರಮುಖ ಕಾರಣವಾಗಿದ್ದು ಅವರ ನಿರ್ಲಕ್ಷ್ಯ ಮತ್ತು ಸೋಂಕಿನ ಗುಣ ಲಕ್ಷಣಗಳು ಕಾಣಿಸಿಕೊಂಡರೂ ಶೀಘ್ರವೇ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯದೇ ಇದ್ದಿದ್ದು ಎಂದು ಪಾಲಿಕೆ ಡೆತ್ ಆಡಿಟ್ ವರದಿಯಲ್ಲಿ ಉಲ್ಲೇಖಿಸಿದೆ. ಆದರೆ ವಾಸ್ತವದಲ್ಲಿ ಎರಡನೇ ಅಲೆಯ ಹೊತ್ತಿಗೆಲ್ಲಾ ಜನರು ಕೊರೋನಾವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಹೀಗಿದ್ರೂ ಸರ್ಕಾರಕ್ಕೆ ಹಾಗೂ ಬಿಬಿಎಂಪಿಗೆ ಸೂಕ್ತ ರೀತಿಯ ವ್ಯವಸ್ಥೆಯನ್ನು ಕಲ್ಪಿಸಿಕೊಡಲು ಸಾಧ್ಯವಾಗದೇ ಇದ್ದಿದ್ದೇ ಇಷ್ಟೊಂದು ಸಾವಿಗೆ ಕಾರಣ ಎನ್ನಬಹುದು. ಆಕ್ಸಿಜನ್, ಬೆಡ್ ಹಾಗೂ ರೆಮಿಡಿಸ್ವಿರ್ ಔಷಧಿ ಸೂಕ್ತ ಸಮಯಕ್ಕೆ ಸಿಗದೆ ಇದ್ದಿದ್ದೇ ಇದಕ್ಕೆ ಸೂಕ್ತ ಉದಾಹರಣೆ. ಜನರ ನಿರ್ಲಕ್ಷ್ಯದ ಜೊತೆಗೆ ಸರ್ಕಾರ ಹಾಗೂ ಪಾಲಿಕೆ ಅಸಮರ್ಥತೆ ಕೂಡ ಈ ಸಾವಿಗೆ ಹೊಣೆಯಾಗಿದೆ.

ಒಟ್ಟಾರೆ ಕೊರೋನಾಗೆ ಈವರೆಗೆ 16,307 ಮಂದಿಗೆ ಬಲಿಯಾಗಿರುವುದಾಗಿ ಬಿಬಿಎಂಪಿ ವರದಿ ಸಿದ್ಧ ಮಾಡಿಕೊಂಡಿದೆ. ಅದರಲ್ಲೂ ಅದಕ್ಕೆ ಕೊಟ್ಟ ಕಾರಣದಲ್ಲಿ ಜನರೇ ಇದಕ್ಕೆ ಎಂದಿದೆ. ಆದರೆ ವಾಸ್ತವದಲ್ಲಿ ಜನರ ನಿರ್ಲಕ್ಷ್ಯದ ಜೊತೆಗೆ ಬಿಬಿಎಂಪಿಯ ಆಡಳಿತ ವೈಫಲ್ಯತೆಯೂ ಸಮನಾಗಿ ಕಾರಣವಾಗಿದೆ. ಸದ್ಯ ಸಾವಿನ ಪ್ರಮಾಣ ಕಡಿಮೆಯಾಗಿದೆ ನಿಜ. ಆದರೂ ಜನರ ನಿರ್ಲಕ್ಷ್ಯ ಮಾಡದೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಪಡೆಯುವ ಅಗತ್ಯವಿದೆ.

Tags: BJPCovid 19ಕರೋನಾಕೋವಿಡ್-19ಡೆತ್ ಆಡಿಟ್ಬಿಜೆಪಿಬಿಬಿಎಂಪಿ
Previous Post

ಪ್ರಿಯಾಂಕಾ ಖರ್ಗೆ ಹೆಸರು ಗಂಡೊ – ‌ಹೆಣ್ಣೋ ಗೊತ್ತಿಲ್ಲ – ಸಂಸದ ಪ್ರತಾಪ್ ಸಿಂಹ

Next Post

ವಿಧಾನ ಪರಿಷತ್ ಚುನಾವಣೆ ; ಒಂದು ಲಕ್ಷ ಮತದಾರರಿಂದ ಹಕ್ಕು ಚಲಾವಣೆ!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ವಿಧಾನ ಪರಿಷತ್ ಚುನಾವಣೆ ; ಒಂದು ಲಕ್ಷ ಮತದಾರರಿಂದ ಹಕ್ಕು ಚಲಾವಣೆ!

ವಿಧಾನ ಪರಿಷತ್ ಚುನಾವಣೆ ; ಒಂದು ಲಕ್ಷ ಮತದಾರರಿಂದ ಹಕ್ಕು ಚಲಾವಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada