• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ವಿಚಾರ: ಸರ್ಕಾರದ ನಡೆಯನ್ನು ಸಾಲುಸಾಲಾಗಿ ಟೀಕಿಸಿದ ಡಿಕೆಶಿ

by
April 22, 2021
in ಕರ್ನಾಟಕ
0
ಕರೋನಾ ವಿಚಾರ: ಸರ್ಕಾರದ ನಡೆಯನ್ನು ಸಾಲುಸಾಲಾಗಿ ಟೀಕಿಸಿದ ಡಿಕೆಶಿ
Share on WhatsAppShare on FacebookShare on Telegram

ಕರೋನಾ ವಿಚಾರದಲ್ಲಿ ಕೇಂದ್ರ ಹಾಗು ರಾಜ್ಯಸರ್ಕಾರದ ನಿರ್ಧಾರಗಳನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತರಾಟೆಗೆ ತೆಗೆದುಕೊಂಡಿದ್ದಾರೆ. ತಾಂತ್ರಿಕ ಸಮಿತಿ ಸಲಹೆಯಂತೆ ನಿರ್ಧಾರ ಕೈಗೊಳ್ಳಬೇಕು ಎಂದು ನಾವು ಸರ್ಕಾರಕ್ಕೆ ತಿಳಿಸಿದ್ದೇವೆ. ಮಾಧ್ಯಮಗಳ ವರದಿ ಪ್ರಕಾರ ಸರ್ಕಾರಕ್ಕೆ ಲಾಕ್ ಡೌನ್ ಬಗ್ಗೆ ಆಸಕ್ತಿ ಇತ್ತು ಅನಿಸುತ್ತದೆ. ಆದರೆ ನಿನ್ನೆ ಪ್ರಧಾನಮಂತ್ರಿಗಳ ಸಂದೇಶ ಮೇರೆಗೆ ಕೆಲವು ಬದಲಾವಣೆ ಮಾಡಲಾಗಿದೆ ಎಂದು ಕಾಲೆಳೆದಿದ್ದಾರೆ.

ADVERTISEMENT

ಸರ್ಕಾರ ಈಗ ಮಾರ್ಗಸೂಚಿ ಹೊರಡಿಸಿದ್ದು, ಎಲ್ಲ ವರ್ಗದ ಜನ ಈಗ ಸಹಕಾರ ನೀಡಬೇಕಾದ ಅವಶ್ಯಕತೆ ಇದೆ. ಸರ್ಕಾರದ ವೈಫಲ್ಯದ ಬಗ್ಗೆ ರಾಜ್ಯಪಾಲರ ಸಭೆಯಲ್ಲಿ ಹೇಳಿದ್ದೇವೆ. ವಿವರವಾಗಿ ಹೇಳಲು ಸಾಧ್ಯವಾಗದಿದ್ದರೂ ಕಳೆದ ಒಂದು ವರ್ಷದಿಂದ ಸರ್ಕಾರದ ವೈಫಲ್ಯ ತಿಳಿಸಿದ್ದೇವೆ. ಅವರು ಈ ವಿಚಾರದಲ್ಲಿ ವಿಫಲರಾಗಿದ್ದಾರೆ ಎಂಬುದಕ್ಕೆ ಸೋಂಕಿನ ಸಂಖ್ಯೆಗಳೇ ಸಾಕ್ಷಿ ಎಂದು ಸರ್ಕಾರದ ವಿರುದ್ಧವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಪ್ರಧಾನ ಮಂತ್ರಿಗಳ ಭಾಷಣವನ್ನು ಖರ್ಗೆ ಸಾಹೇಬರು ಪ್ರವಚನ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಲಸಿಕೆ ವಿಚಾರವಾಗಿ ಹೇಳಿದ ತೀರ್ಮಾನಗಳನ್ನು ಯಾಕೆ ಮುಂಚಿತವಾಗಿ ಮಾಡಿರಲಿಲ್ಲ? ಇದೆಲ್ಲವೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಸಾಬೀತುಪಡಿಸುತ್ತಿವೆ ಎಂದು ದೂರಿದ್ದಾರೆ.

ಪರಿಸ್ಥಿತಿ ಕೈತಪ್ಪಿದಾಗ ಲಸಿಕೆಯ ಹೆಚ್ಚಿನ ಉತ್ಪಾದನೆಗೆ ಅವಕಾಶ ಕೊಟ್ಟಿದ್ದೇನೆ, ತೆರಿಗೆ ವಿನಾಯಿತಿ ಕೊಟ್ಟಿದ್ದೇನೆ ಎಂದು ಹೇಳುತ್ತಿದ್ದಾರೆ. ಲಸಿಕೆಗಳನ್ನು ಬೇರೆ ದೇಶಗಳಿಗೆ ಕಳುಹಿಸಿ ದೊಡ್ಡ ಮನುಷ್ಯ ಎಂದು ಕರೆಸಿಕೊಳ್ಳುವ ಬದಲು, ನಿಮಗೆ ಮತ ಹಾಕಿ ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದ ಜನರಿಗೆ ಔಷಧಿ ನೀಡಬಹುದಿತ್ತು. ತಮ್ಮ ದೊಡ್ಡಸ್ಥಿಕೆ ತೋರಿಸಿಕೊಳ್ಳಲು ಲಸಿಕೆಗಳನ್ನು ಬೇರೆ ದೇಶಗಳಿಗೆ ಹಂಚಿದ್ದಾರೆಂದು ಕೇಂದ್ರ ಸರ್ಕಾರದ ನಡೆಯನ್ನು ಟೀಕಿಸಲಾಗಿದೆ.

ಸರ್ಕಾರ ಮೊದಲು ದೇಶದ ಜನರಿಗೆ ಮಾನಸಿಕವಾಗಿ ಧೈರ್ಯ ತುಂಬಿ, ಆರ್ಥಿಕವಾಗಿ ಶಕ್ತಿ ತುಂಬಬೇಕು. ಇಷ್ಟು ದಿನಗಳಿಂದ ಆರೋಗ್ಯ, ಕಂದಾಯ ಹಾಗೂ ಗೃಹ ಸಚಿವರು ಮಾತನಾಡುತ್ತಿದ್ದರು. ಈಗ ಜನರ ಆಕ್ರೋಶಕ್ಕೆ ಮುಖ್ಯಕಾರ್ಯದರ್ಶಿಗಳ ಮೂಲಕ ಹೇಳಿಕೆ ಕೊಡಿಸುತ್ತಿದ್ದಾರೆ. ಇದು ಸರ್ಕಾರ ವಿಫಲ ತೋರುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಈಗ ರಾಜ್ಯಪಾಲರ ಆಳ್ವಿಕೆ ಇದೆ. ರಾಜ್ಯಪಾಲರ ಬಗ್ಗೆ ನಮಗೆ ಗೌರವ ಇದೆ. ಆದರೆ ಇದು ಸಂವಿಧಾನದ ವಿಚಾರ. ಇವತ್ತು ಇಲ್ಲಿ ಆಗಿದೆ, ನಾಳೆ ಬೇರೆ ಕಡೆಯಲ್ಲಿ ಆಗಬಹುದು. ಅವರು ಪ್ರಧಾನಮಂತ್ರಿಗಳು ಹೇಳಿದ ತಕ್ಷಣ ಸಂವಿಧಾನ ಬದಲಿಸಿ ಸಭೆ ಮಾಡಬಹುದಾ. ಸಂವಿಧಾನ ಬದಲಾವಣೆ ಮಾಡಿ ನಮ್ಮ ರಾಜ್ಯವನ್ನು ದೆಹಲಿ, ಪುದುಚೆರಿ ರೀತಿ ಕೇಂದ್ರಾಡಳಿತ ಪ್ರದೇಶ ಮಾಡಲಿ.

ಡಬಲ್ ಇಂಜಿನ್ ಸರ್ಕಾರದಲ್ಲಿ ಏನಾಗುತ್ತಿದೆ. ಔಷಧಿ ತಯಾರಿಕೆಗೆ ಎಲ್ಲರಿಗೂ ಅವಕಾಶ ಕೊಟ್ಟು ನೀವೇ ಪರಿಶೀಲಿಸಿದ್ದರೆ ಏನಾಗುತ್ತಿತ್ತು? ನಮ್ಮ ರಾಜ್ಯದಲ್ಲೇ ನವೆಂಬರ್ 20ರಂದು ಮುನ್ನಚ್ಚರಿಕೆ ನೀಡಲಾಗಿದ್ದರೂ ಯಾಕೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದು ಕರ್ನಾಟಕ ಸರ್ಕಾರದ ವೈಫಲ್ಯ. ರಾಜ್ಯದಲ್ಲಿ ಮೊದಲ ಲಸಿಕೆ ಹಾಕಿಸಿಕೊಂಡವರಿಗೆ ಎರಡನೇ ಲಸಿಕೆ ನೀಡಿಲ್ಲ. ಪ್ರಧಾನಿಗಳು ಭಾಷಣ ಮಾಡಿ ಎಲ್ಲವನ್ನು ಮಾಡಿದ್ದೇವೆ ಎನ್ನುತ್ತಾರೆ. ಈಗಲೂ ನಮಗೆ ಹಾಸಿಗೆ, ಆಕ್ಸಿಜನ್ ಬೇಕು ಅಂತಾ ನೂರಾರು ಕರೆ ಬರುತ್ತಿದೆ. ಮಾಧ್ಯಮಗಳು ಕೂಡ ಜನರಲ್ಲಿ ಭಯ ಹುಟ್ಟಿಸುವುದು ಬೇಡ. ನೀವು ವಾಸ್ತವದ ಸ್ಥಿತಿ ತೋರಿಸುತ್ತಿದ್ದೀರಿ, ಅದರ ಜತೆಗೆ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿ ಎಂದು ಸಲಹೆ ಕೊಟ್ಟಿದ್ದಾರೆ.

ಇವತ್ತು ಪ್ರಿಯಾಂಕ ಗಾಂಧಿ ಅವರು ಹೇಳಿರುವ ಮಾತು ಅರ್ಥಗರ್ಭಿತವಾಗಿದೆ. ಉತ್ತರ ಪ್ರದೇಶ ವಿಚಾರವಾಗಿ ಮಾತನಾಡುತ್ತಾ, ಜನ ಅಳುತ್ತಿರುವ ಸಮಯದಲ್ಲಿ ಪಶ್ಚಿಮ ಬಂಗಾಳದ ಚುನಾವಣೆ ಸಮಾವೇಷದಲ್ಲಿ ನಗುತ್ತಿದ್ದೀರಿ ಎಂದು ಟೀಕಿಸಿದ್ದಾರೆ.

ಇದು ಬೇಜವಾಬ್ದಾರಿ ಸರ್ಕಾರ. ಈ ಸಮಯದಲ್ಲಿ ಚುನಾವಣೆಗೆ ಏನು ತಯಾರಿ ಮಾಡಿಕೊಳ್ಳುತ್ತಿದ್ದಾರೆ. 6 ತಿಂಗಳ ಕಾಲ ಅವರ ಅಧಿಕಾರ ಅವಧಿ ವಿಸ್ತರಣೆ ಮಾಡಿ ಸುಗ್ರೀವಾಜ್ಞೆ ತರಲು ಸಾಧ್ಯವಿಲ್ಲವೇ? ಯಾವುದಾದರೂ ಜಿಲ್ಲಾ ಸಚಿವರು, ಆಸ್ಪತ್ರೆಯಲ್ಲಿ ವ್ಯವಸ್ಥೆ, ರೋಗಿಗಳ ಸ್ಥಿತಿ ಪರಿಶೀಲಿಸಿದ್ದಾರಾ? ಇಲ್ಲ. ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಬಳಸಿಕೊಳ್ಳಿ. ಅವರಿಗೆ ಆಡಳಿತ ವ್ಯವಸ್ಥೆ ನಿಭಾಯಿಸಲು ಗೊತ್ತಿಲ್ಲ. ಯಾರಾದರೂ 6 ತಿಂಗಳಿಗೊಮ್ಮೆ ಅಧಿಕಾರಗಳನ್ನು ವರ್ಗಾವಣೆ ಮಾಡ್ತಾರಾ? ಸರ್ಕಾರವೇ ಜನರಿಗೆ ಈ ಕಾಯಿಲೆ ಅಂಟಿಸುತ್ತಿದ್ದಾರೆ. ಜನರಿಗೆ ಸಾಂತ್ವಾನ ಹೇಳಿ, ಆರ್ಥಿಕ ಶಕ್ತಿ ನೀಡಿ, ಆರೋಗ್ಯ, ಎಲ್ಲ ಕುಟುಂಬದವರಿಗೂ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮೃತರಾದವರು ಯಾವ ಕಾರಣದಿಂದ ಸತ್ತರು ಎಂಬುದರ ಬಗ್ಗೆ ಒಂದು ಆಡಿಟ್ ಮಾಡಿಸಿ. ಅಷ್ಟು ಮಾನವೀಯತೆ ಇಲ್ಲ ಅಂದ್ರೆ ಹೇಗೆ..? ಸತ್ತವರಿಗೆ ಹೊರವಲಯದಲ್ಲಿ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಿಕೊಡಬಹುದು. ಹಾಗೆ ಮಾಡಿದರೆ ಅವರು ತಮ್ಮ ಸಂಬಂಧಿಕರಿಗೆ ಅಂತಿಮ ಗೌರವ ಕೊಟ್ಟು ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಆದರೆ ಅದನ್ನು ಮಾಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಡಿಕೆ ಶಿವಕುಮಾರ್‌ ಕಳವಳ ವ್ಯಕ್ತಪಡಿಸಿದ್ದಾರೆ.

Previous Post

ಸರ್ಕಾರದ ವೈಫಲ್ಯವನ್ನು ಅಧಿಕೃತಗೊಳಿಸಿತೆ ರಾಜ್ಯಪಾಲರ ಸಭೆ..?

Next Post

ಬಡ ಭಾರತೀಯರಿಗೆ ಕರೋನಾಗಿಂತಲೂ ಕಂಟಕಪ್ರಾಯವಾಗಿದೆ ಸೋಂಕು ನಿಯಂತ್ರಣ ಕ್ರಮಗಳು!

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಬಡ ಭಾರತೀಯರಿಗೆ ಕರೋನಾಗಿಂತಲೂ ಕಂಟಕಪ್ರಾಯವಾಗಿದೆ ಸೋಂಕು ನಿಯಂತ್ರಣ ಕ್ರಮಗಳು!

ಬಡ ಭಾರತೀಯರಿಗೆ ಕರೋನಾಗಿಂತಲೂ ಕಂಟಕಪ್ರಾಯವಾಗಿದೆ ಸೋಂಕು ನಿಯಂತ್ರಣ ಕ್ರಮಗಳು!

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada