• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೂನ್ ನಿಂದ ಅಕ್ಟೋಬರ್ ವರೆಗೂ ಕರೋನಾ ಹೆಚ್ಚಳವಾಗಬಹುದು : ಸಚಿವ ಡಾ.ಕೆ. ಸುಧಾಕರ್

Any Mind by Any Mind
June 16, 2022
in ಕರ್ನಾಟಕ
0
ಜೂನ್ ನಿಂದ ಅಕ್ಟೋಬರ್ ವರೆಗೂ ಕರೋನಾ ಹೆಚ್ಚಳವಾಗಬಹುದು : ಸಚಿವ ಡಾ.ಕೆ. ಸುಧಾಕರ್
Share on WhatsAppShare on FacebookShare on Telegram

ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಜೂನ್ ಮೂರನೇ ವಾರದಿಂದ ಅಕ್ಟೋಬರ್‌ ವರೆಗೂ ಸೋಂಕು ಹೆಚ್ಚಳವಾಗಬಹುದು ಎಂದು ಕಾನ್ಪುರ ಐಐಟಿ ವರದಿ ನೀಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ ಮೂರನೇ ವಾರದಿಂದ ಅಕ್ಟೋಬರ್‌ ವರೆಗೂ ಕರೋನಾ ಸೋಂಕು ಹೆಚ್ಚಳವಾಗಬಹುದು ಎಂದು ಕಾನ್ಪುರ ಐಐಟಿ ವರದಿ ನೀಡಿದೆ. ನಾವೂ ಎಲ್ಲವನ್ನೂ ಸೂಕ್ಷ್ಮವಾಗಿ ನೋಡುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ದತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೋವಿಡ್ ಪ್ರಭೇದ ಸೌಮ್ಯ ಲಕ್ಷಣ ಇರುವುದರಿಂದ ಜನ ಸಾಮಾನ್ಯರು ಯಾವುದೇ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನ ಎರಡು ಶಾಲೆಗಳಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಘೊಷಿಸಿಲಾಗಿದೆ. ಕರೋನಾ ನಿಯಂತ್ರಣಕ್ಕೆ ಈಗಾಗಲೇ ಸ್ಪಷ್ಟವಾದ ನಿಯಮಾವಳಿ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬರುವಾಗ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಚೆಕ್ ಮಾಡಲು ಸೂಚಿಸಿದ್ದೇವೆ. ಶಾಲೆಗಳಲ್ಲಿ ಎಲ್ಲಾ ನಿಯಮ ಪಾಲನೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ಮೂರನೇ ಅಲೆ ಬಂದುಹೋಗಿದೆ. ಮೂರನೇ ಅಲೆಯಲ್ಲಿ ಸಾವು ನೋವು ಹೆಚ್ಚಾಗಿ ಕಂಡು ಬಂದಿಲ್ಲ . ಲಸಿಕೆಯ ಕಾರಣದಿಂದ ಕೋವಿಡ್ ಅಷ್ಟೊಂದು ಹರಡಲಿಲ್ಲ . ನಮ್ಮ ಸರ್ಕಾರ ಗರಿಷ್ಠ ಲಸಿಕೆ ನೀಡಿದೆ. ನಮ್ಮ ರಾಜ್ಯ ದಲ್ಲಿ ಎರಡು ಡೋಸ್ 10 ಕೋಟಿಗೂ ಹೆಚ್ಚು ಲಸಿಕೆ ನೀಡಿದ್ದೇವೆ. ವ್ಯಾಕ್ಸಿನ್ ತೆಗೆದುಕೊಂಡರೆ ಕೋವಿಡ್ ಬರುವುದಿಲ್ಲ ಎಂದಲ್ಲ , ಆದರೆ ಸಾವು ನೋವಿನ ಪ್ರಮಾಣ ಕಡಿಮೆಯಾಗುತ್ತದೆ. ಮೂರನೇ ಡೋಸ್ ತೆಗೆದುಕೊಂಡವರ ಪ್ರಮಾಣ ಕಡಿಮೆಯಿದೆ. ಮುಂದಿನ ಅಲೆ ಬರುವ ತನಕ ಕಾಯುವುದು ಬೇಡ ಲಸಿಕೆ ಲಭ್ಯವಿದ್ದಾಗ ತೆಗೆದುಕೊಳ್ಳಿ ಎಂದರು.

ಕಾಂಗ್ರೆಸ್​ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಕೆ ಸುಧಾಕರ್, ಕಾಂಗ್ರೆಸ್ ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್​​ ಹೆಚ್ಚಳ ಆದರೆ‌ ಅದಕ್ಕೆ ಅವರೇ ಹೊಣೆ ಎಂದು ಎಚ್ಚರಿಸಿದ್ದಾರೆ. ಕಾಂಗ್ರೆಸ್ ನವರೇ ನೈತಿಕ ಹೊಣೆ ಹೊರಬೇಕು. ಅವರು ಪ್ರತಿಭಟನೆ ಮಾಡಿದೋದಾದರೆ ಫ್ರೀಡಂ ಪಾರ್ಕ್ ನಲ್ಲಿ ಮಾಡಲಿ. ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಇವತ್ತು ರಾಜಭವನ ಚಲೋ ಮಾಡ್ತಿದ್ದಾರೆ. ಇವತ್ತಿನ ಹೋರಾಟಕ್ಕೆ ಕೊವೀಡ್ ಉಲ್ಲಂಘನೆ ಅಡಿ ಕೇಸ್ ದಾಖಲಿಸುವ ಸಂಬಂಧ ಮುಖ್ಯಮಂತ್ರಿ ಗಳ ಜೊತೆ ಮಾತಾಡ್ತೇನೆ ಎಂದ ಸುಧಾಕರ್ ಹೇಳಿದರು.

Tags: BJPCongress PartyCovid 19ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಕೆ ಸುಧಾಕರ್ಕೋವಿಡ್-19ನರೇಂದ್ರ ಮೋದಿಬಿಜೆಪಿಸಚಿವ ಡಾ.ಕೆ. ಸುಧಾಕರ್ಸಿದ್ದರಾಮಯ್ಯ
Previous Post

ಉತ್ತರ ಪ್ರದೇಶ ಹಿಂಸಾಚಾರ : 350 ಮಂದಿಯ ವಿರುದ್ಧ FIR, 250 ಕ್ಕೂ ಅಧಿಕ ಬಂಧನ

Next Post

ದೇಶದಲ್ಲಿ ಜಿಗಿತ ಕೊರೊನಾ: ಒಂದೇ ದಿನ 12,213 ಸೋಂಕು ಪತ್ತೆ

Related Posts

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!
ಕರ್ನಾಟಕ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

by ಪ್ರತಿಧ್ವನಿ
April 14, 2026
0

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ...

Read moreDetails
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
Next Post
ಮುಂಬೈ ನಂತರ ಗುಜರಾತ್‌ ನಲ್ಲಿ ಎಕ್ಸ್‌ ವಿ ವೈರಸ್‌ ಪತ್ತೆ!

ದೇಶದಲ್ಲಿ ಜಿಗಿತ ಕೊರೊನಾ: ಒಂದೇ ದಿನ 12,213 ಸೋಂಕು ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada