ಕರೋನ ಮೂರನೇ ಅಲೆಯ ಕಂಟಕ ಮುಗಿತು ಅನ್ನುವಾಗಲೇ ನಾಲ್ಕನೇ ಅಲೆಯ ಭಾರತದಾದ್ಯಂತ ಆವರಿಸುವ ಭೀತಿ ಶುರುವಾಗಿದ್ದು. ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆಯನ್ನು ಸಿಎಂ ಬೊಮ್ಮಾಯಿ ಕರೆದಿದ್ದಾರೆ ಅದಕ್ಕೂ ಮುನ್ನ ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್ ಈ ಮಾಸ್ಕ್ ಕಡ್ಡಾಯವಾಗಿ ದರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಹೌದು ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರು ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಎಚ್ಚರಿಸಿದ್ದಾರೆ.

ಮುಂದುವರೆದು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.






