ಶಿವಮೊಗ್ಗ: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.
ಬೆಂಗಳೂರಿನಲ್ಲಿರುವ (Bengaluru) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ಇವರು ಶಿವಮೊಗ್ಗದ (Shivamogga) ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಗರಣ ನಡೆದಿತ್ತು.
ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಪದ್ಮಾನಾಭ, ಪರಶುರಾಮ್, ಶುಚಿಸ್ವತ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.