2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ(karnataka assembly election 2023) ಇನ್ನು ಮೂರೇ ಮುರು ದಿನಗಳಷ್ಟೇ ಬಾಕಿ ಇದೆ. ಇದೇ ಮೇ 10ರಂದು ಚುನಾವಣೆ(election) ನಡೆಯಲಿದೆ. ಈಗಾಗಲೇ ಬಿಜೆಪಿ,(BJP) ಕಾಂಗ್ರೆಸ್,(CONGRESS) ಜೆಡಿಎಸ್(JDS) ಪಕ್ಷದ ನಾಯಕರು ರಾಜ್ಯದ ಮೂಲೆ ಮೂಲೆಗೂ ತಿರುಗಿ ಭರ್ಜರಿ ಮತ ಪ್ರಚಾರ ನಡೆಸಿದ್ದಾರೆ. ಇನ್ನು ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಇಂದು ಕಡೆಯದಾಗಿ ಪ್ರಧಾನಿ ನರೇಂದ್ರ ಮೋದಿ(PM narendra modi) ರೋಡ್ ಶೋ ನಡೆಸಲಿದ್ದಾರೆ. ಈ ಮಧ್ಯೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ, ಕೆಪಿಸಿಸಿ(notice) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ(DK shivakumar) ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಸರ್ಕಾರ(government) ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನ ಇಂದು ಸಂಜೆ 7ಗಂಟೆಯೊಳಗೆ ಒದಗಿಸುವಂತೆ ಡಿ.ಕೆ.ಶಿವಕುಮಾರ್‌ಗೆ ಆಯೋಗ ನೋಟಿಸ್ ಜಾರಿ ಮಾಡಿದೆ. `ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹೀರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಆರೋಪಿಸಲಾಗಿದೆ. ಇದು ಸರಾಗ ಚುನಾವಣೆ(election) ಮೇಲೂ ಪರಿಣಾಮ ಬೀರುವಂತಹದ್ದಾಗಿದೆ. ಜಾಹೀರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ಇಂದು ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಡಿ.ಕೆ.ಶಿವಕುಮಾರ್‌ಗೆ(DK shivakumar) ಚುನಾವಣಾ ಆಯೋಗವು ತಾಕೀತು ಮಾಡಿದೆ.