ಬೆಂಗಳೂರು : “ಕೇವಲ ಪಾಸಾಗುವುದು ಮುಖ್ಯವಲ್ಲ, ಗುಣಾತ್ಮಕ ಫಲಿತಾಂಶ ಬರಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ ಮತ್ತು ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿ ಎಂದು ಶಿಕ್ಷಕರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕರೆ ನೀಡಿದ್ದಾರೆ.

ಹಾವೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ.ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲೆ ನೌಕರರ ಸಂಘದ ಸಹಯೋಗದೊಂದಿಗೆ ಆಯೋಜಿಸಲಾದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣಾ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಎಸ್.ಎಸ್.ಎಲ್.ಸಿ ಫಲಿತಾಂಶ ಎಂಬುದು ವಿದ್ಯಾರ್ಥಿಗಳ ಜೀವನದ ಮೊದಲ ಮಹತ್ವದ ಘಟ್ಟ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ದೊಡ್ಡದು. ನಿಮ್ಮ ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಯಶಸ್ವಿಯಾಗುವುದು ನಮ್ಮ ಗುರಿಯಾಗಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕಸ ವಿಲೇವಾರಿಗೆ ಅಡ್ಡಿಡಿಸುವವರ ಮನೆ ಮುಂದೆ ಕಸ ಸುರಿಯುತ್ತೇವೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ
“ಕೇವಲ ಪಾಸಾಗುವುದು ಮುಖ್ಯವಲ್ಲ, ಗುಣಾತ್ಮಕ ಫಲಿತಾಂಶ ಬರಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳಿ ಮತ್ತು ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
“ಈ ಸಂವಾದದ ಮೂಲಕ ನಿಮ್ಮ ಶಾಲೆಗಳಲ್ಲಿ ಎದುರಿಸುತ್ತಿರುವ ಮೂಲಭೂತ ಸೌಕರ್ಯವಾಗಲಿ ಅಥವಾ ಬೋಧನಾ*ಸಮಸ್ಯೆಗಳಾಗಲಿ, ಜಿಲ್ಲಾಡಳಿತವು ನಿಮ್ಮ ಬೆನ್ನಿಗೆ ನಿಲ್ಲಬೇಕು ಹಾಗೂ ಪೋಷಕರೊಂದಿಗೆ ನಿರಂತರ ಸಂಪರ್ಕದಲ್ಲಿರಿ. ಶಾಲೆಯ ಶಿಸ್ತು ಮತ್ತು ವಿದ್ಯಾರ್ಥಿಗಳ ಹಾಜರಾತಿಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
ಹಾವೇರಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರಬೇಕು ಎಂಬುದು ನಮ್ಮ ಆಶಯ. ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ನಾವು ಹೊಸ ದಾಖಲೆ ಬರೆಯಲಿ ನಿಮ್ಮೆಲ್ಲರಿಗೂ ಶುಭವಾಗಲೆಂದು ಎಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಸಿ.ಇ ಒ ಜಿಲ್ಲಾ ಪಂಚಾಯತ್ ಹಾವೇರಿ, ಅಪರ ಆಯಕ್ತರು ಶಾಲಾ ಶಿಕ್ಷಣ ಇಲಾಖೆ,ಧಾರವಾಡ. ಡಿ. ಡಿ. ಪಿ. ಐ ಹಾವೇರಿ, ಬಿ. ಇ. ಒ ಹಾವೇರಿ ಹಾಗೂ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ) ಜಿಲ್ಲಾ ಘಟಕ ಹಾವೇರಿ, ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳು, ಸಂಘದ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.






