• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

ಪ್ರತಿಧ್ವನಿ by ಪ್ರತಿಧ್ವನಿ
August 31, 2026
in ಕರ್ನಾಟಕ
0
ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ
Share on WhatsAppShare on FacebookShare on Telegram

ಬೆಂಗಳೂರು ಹಾಗೂ ಕರಾವಳಿ ಭಾಗಗಳಲ್ಲಿ ಖೋಟಾ ನೋಟು ದಂಧೆ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಕಲಿ ನೋಟು ತಯಾರಿಕೆ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿರ್ಮಾಣ ಹಂತದ ಕಟ್ಟಡವೊಂದನ್ನೇ ಅಕ್ರಮ ದಂಧೆಯ ಅಡ್ಡೆಯನ್ನಾಗಿ ಮಾಡಿಕೊಂಡು ನಕಲಿ ನೋಟುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತರಜಿಲ್ಲಾ ಗ್ಯಾಂಗ್‌ವೊಂದನ್ನು ಐಜೂರು ಪೊಲೀಸರು ಬಯಲಿಗೆಳೆದಿದ್ದಾರೆ.ರಾಮನಗರದ ಶಾಂತಿಲಾಲ್ ಲೇಔಟ್‌ನಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಯಾರಿಗೂ ಅನುಮಾನ ಬಾರದಂತೆ ಕಟ್ಟಡವನ್ನು ಬಳಸಿಕೊಂಡು ಗ್ಯಾಂಗ್ ನಕಲಿ ನೋಟುಗಳನ್ನು ಮುದ್ರಿಸುತ್ತಿತ್ತು.

ADVERTISEMENT
D. K. Shivakumar :ರೈತರಿಗೆ ಇನ್ಮೇಲೆ ಆಸ್ತಿ ಏರಿಕೆ ಆಗುತ್ತೆ : ಸಿಎಂ ಡಿಕೆ ಶಿವಕುಮಾರ್..!#pratidhvani

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಐಜೂರು ಪೊಲೀಸರು ಐವರನ್ನು ವಶಕ್ಕೆ ಪಡೆದು, ನಕಲಿ ನೋಟು ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ಹೊರಗಿನಿಂದ ವಿಶೇಷ ಕಾಗದದ ಶೀಟ್‌ಗಳನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ರಾಸಾಯನಿಕ ಲೇಪನ ಮಾಡಿ ಅಸಲಿ ನೋಟುಗಳಂತೆ ಕಾಣುವಂತೆ ₹200 ಹಾಗೂ ₹500 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರು ಎನ್ನಲಾಗಿದೆ.

 

ಮುದ್ರಣದ ಬಳಿಕ ಶೀಟ್‌ಗಳನ್ನು ಅಚ್ಚುಕಟ್ಟಾಗಿ ಕತ್ತರಿಸಿ, ಬಂಡಲ್‌ಗಳಾಗಿ ಪ್ಯಾಕ್ ಮಾಡಿ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಹಾಗೂ ಬೆರಳಚ್ಚು ತಜ್ಞರನ್ನೊಳಗೊಂಡ SOCO ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನೋಟು ಮುದ್ರಣಕ್ಕೆ ಬಳಸಿದ್ದ ಕಾಗದ, ರಾಸಾಯನಿಕ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

D. K. Shivakumar : ಬೆಂಗಳೂರು ಬಗ್ಗೆ ಸಂಪೂರ್ಣವಾಗಿ ವಿವರಿಸಿದ ಸಿಎಂ ಡಿಕೆಶಿ..!

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲೂ ನಕಲಿ ನೋಟು ತಯಾರಿಕೆ ಜಾಲ ಪತ್ತೆಯಾಗಿತ್ತು. ಮಹಮ್ಮದ್ ಇದ್ರೀಸ್ ಎಂಬಾತನ ನಿರ್ಮಾಣ ಹಂತದ ಕಟ್ಟಡದಲ್ಲಿ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ಉಪ್ಪಿನಂಗಡಿ ಪೊಲೀಸರು ಮಧ್ಯರಾತ್ರಿ ದಾಳಿ ನಡೆಸಿದ್ದರು.

ಈ ವೇಳೆ ಏಳು ಮಂದಿಯನ್ನು ಬಂಧಿಸಿ, ನಕಲಿ ನೋಟು ತಯಾರಿಕೆಗೆ ಸಂಬಂಧಿಸಿದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ ರಾಮನಗರದಲ್ಲೂ ಇದೇ ರೀತಿಯ ಜಾಲ ಪತ್ತೆಯಾಗಿರುವುದು ಪೊಲೀಸರ ತನಿಖೆಗೆ ಮತ್ತಷ್ಟು ಮಹತ್ವ ನೀಡಿದೆ.

Tags: bengaluru crimeCounterfeit CurrencyCounterfeit NotesCRIME NEWSCrime News Karnatakafake currencyFake Note RacketIjoor PoliceKarnataka CrimeKarnataka PolicePolice RaidramanagaraSouth Karnataka
Previous Post

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

Next Post

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

Related Posts

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ
Top Story

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

by ಪ್ರತಿಧ್ವನಿ
August 31, 2026
0

ಬೆಂಗಳೂರು: ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ರೂಫ್‌ಟಾಪ್ ಫೋಟೋವೋಲ್ಟಾಯಿಕ್ ವ್ಯವಸ್ಥೆಗಳನ್ನು ಅಳವಡಿಸುವ ಕಾರ್ಯವನ್ನು ರಾಜ್ಯ ಸರ್ಕಾರ ತ್ವರಿತಗೊಳಿಸಲಿದೆ. ಬೆಸ್ಕಾಂ...

Read moreDetails
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

August 31, 2026
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

August 31, 2026
ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಜನಗಣತಿ ಚರ್ಚೆ ಅಪೂರ್ಣ ಆಗಿದ್ಯಾಕೆ..?

ಇಸ್ಲಾಂ ಶ್ರೇಷ್ಠ ಧರ್ಮ ಎಂದ ಬಸವರಾಜ ರಾಯರೆಡ್ಡಿಯನ್ನು ಸಂಪುಟದಿಂದ ವಜಾಗೊಳಿಸಿ-ಸಿಎಂಗೆ ಆರ್‌.ಆಶೋಕ್‌ ಆಗ್ರಹ

August 31, 2026
Next Post
ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada