ಅಗರ್ತಲಾ: ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಿಗ್ಗೆ 8ರಿಂದ ಮತ ಆರಂಭಗೊಂಡಿದೆ.
ತ್ರಿಪುರಾ, ನಾಗಲ್ಯಾಂಡ್ ನಲ್ಲಿ ಬಿಜೆಪಿ, ಮೇಘಾಲಯದಲ್ಲಿ ಎನ್ ಪಿಪಿ ಪಕ್ಷ ಆರಂಭಿಕ ಮುನ್ನಡೆ ಕಾಯ್ದುಕೊಂಡಿವೆ.
ತ್ರಿಪುರದಲ್ಲಿ ಬಿಜೆಪಿ 37 ಸ್ಥಾನಗಳಲ್ಲಿ ಮುನ್ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಸಿಪಿಎಂ ಪಕ್ಷಗಳು 15 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ಮತ್ತು ಎನ್ ಡಿಪಿಪಿ ಮೈತ್ರಿಕೂಟ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ, ಎನ್ ಪಿಎಫ್ ಪಕ್ಷ 3 ಸ್ಥಾನಗಳಲ್ಲಿ ಮುಂದಿದೆ.
ಮೇಘಾಲಯದಲ್ಲಿ ಎನ್ ಪಿಪಿ 21, ಟಿಎಂಸಿ 10, ಬಿಜೆಪಿ, ಕಾಂಗ್ರೆಸ್ ತಲಾ 10 ಸ್ಥಾನಗಳಲ್ಲಿ ಮುನ್ನಡೆಯುತ್ತಿವೆ. ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ, ನಾಗಾಲ್ಯಾಂಡ್ ಮತ್ತು ಮೇಘಾಲಯದ ತಲಾ 59 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ನಡೆದಿತ್ತು.