• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ : ಡಿ.ಕೆ.ಶಿವಕುಮಾರ್

Any Mind by Any Mind
February 17, 2024
in Top Story, ಕರ್ನಾಟಕ, ರಾಜಕೀಯ
0
ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ : ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಮಂಗಳೂರು (Mangaluru) : ಅತ್ತ ದೆಹಲಿಯಲ್ಲಿ ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಬಿಜೆಪಿ (BJP) ರಾಷ್ಟ್ರೀಯ ಸಮಾವೇಶ ನಡೆಯುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಕಾಂಗ್ರೆಸ್( congress) ಸಮಾವೇಶ ನಡೆದಿದೆ.‌ ಅದು ಕೂಡ ಮಂಗಳೂರಿನಲ್ಲಿ‌‌ ಬೃಹತ್ ಕಾಂಗ್ರೆಸ್ ಸಮಾವೇಶ ನಡೆದಿದೆ‌.

ADVERTISEMENT

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು 370 ಸೀಟು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಆದರೆ ಅದು ಸಾಧ್ಯವಿಲ್ಲ. ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ ಎಂದು ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DKShivakumar) ಹೇಳಿದ್ದಾರೆ.‌

ರಾಹುಲ್ ಗಾಂಧಿ (Rahul Gandhi) ಅವರು ದೇಶ ಒಗ್ಗೂಡಿಸಲು ಭಾರತ ಜೋಡೋ ಯಾತ್ರೆ (Bharatjodoyatre) ಮಾಡುತ್ತಿದ್ದಾರೆ. ದೇಶ ಹೊಸ ನಾಯಕತ್ವ ಚಿಂತನೆಯಲ್ಲಿದೆ. ನಮ್ಮ ರಾಜ್ಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ (Malikarjun Kharge) ಅವರು ಮಹಾತ್ಮಾ ಗಾಂಧಿ(Mahatma Gandhi), ಇಂದಿರಾ ಗಾಂಧಿ (Indra Gandhi), ಸೋನಿಯಾ ಗಾಂಧಿ (Sonia Ghandi)ಅವರು ಕೂತಿದ್ದ ಸ್ಥಾನದಲ್ಲಿ ಕೂತು ದೇಶದಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.‌

ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಕಾರ್ಯಕ್ರಮ ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ಈ ಭಾಗದ ಜನ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಇದೇ ಭೂಮಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದರು. ನಮ್ಮ ಸರ್ಕಾರ ಬಂದ ನಂತರ ಜಾರಿಗೆ ಬಂದ ಮೊದಲ ಗ್ಯಾರಂಟಿ ಯೋಜನೆ ಇದಾಗಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಯೋಜನೆ ಜಾರಿಯಾದ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಸರ್ಕಾರಕ್ಕೆ ಪತ್ರ ಬರೆದು ನಿಮ್ಮ ಯೋಜನೆಯಿಂದ ಈ ಭಾಗದ ಪುಣ್ಯಕ್ಷೇತ್ರಗಳಿಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದೆ. ದೇವಾಲಯಗಳಲ್ಲಿ ಮುಖ್ಯಮಂತ್ರಿಗಳ ಹೆಸರಲ್ಲಿ ಪೂಜೆ ಮಾಡಿಸಲಾಗುತ್ತಿದೆ. ನಮ್ಮ‌ ಜನಪರ ಯೋಜನೆಗಳು ಜನರನ್ನು ತಲುಪುತ್ತಿದೆ ಎಂದರು.

ಇದು ಐತಿಹಾಸಿಕ ಭೂಮಿ. ಕೋಟಿ ಚೆನ್ನಯನವರಿಂದ, ವೀರ ಅಬ್ಬಕ್ಕ ದೇವಿ, ನಾರಾಯಣ ಗುರುಗಳ ಭೂಮಿ ಇದು. ಈ ಭೂಮಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಇತಿಹಾಸವಿದೆ.

ನಾನು ಚುನಾವಣೆ ಸಮಯದಲ್ಲಿ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ಅಧಿಕಾರ ಕೊಟ್ಟ ನಂತರ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನಿಮಗೆ ಶಕ್ತಿ ನೀಡಿದ್ದೇವೆ ಎಂದು ಹೇಳಿದರು.

ಇಲ್ಲಿರುವ ಕಾರ್ಯಕರ್ತರು ನಮ್ಮ ಯೋಜನೆ ಜಾರಿಯಿಂದಾಗಿ ಆತ್ಮವಿಶ್ವಾಸದಿಂದ ಜನರ ಮುಂದೆ ಹೋಗಿ ಮತ ಕೇಳಬಹುದು. ದೇಶದಲ್ಲಿ ಯಾವುದೇ ಸರ್ಕಾರ ಈ ರೀತಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿಂದೆ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಪ್ಪು ಹಣತಂದು 15 ಲಕ್ಷ ನೀಡುವುದಾಗಿ ಹೇಳಿದ್ದರು. ಎಲ್ಲಾ ರೈತರ ಆದಾಯ ಡಬಲ್ ಮಾಡುತ್ತೇವೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವರು ಹೇಳಿದ್ದನ್ನು ಮಾಡಲಿಲ್ಲ. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಇದನ್ನು ನೋಡಿ ಅರಳಿದ ಕಮಲ ಉದುರಿಹೋಯಿತು, ತೆನೆಹೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಸಮೃದ್ಧಿಯಾಯಿತು, ಕರ್ನಾಟಕ ಪ್ರಗತಿಯಾಯಿತು. ಇದು ನಿಮ್ಮೆಲ್ಲರ ಶಕ್ತಿಯಲ್ಲವೇ? ಎಂದು ವಿವರವಾಗಿ ಮಾತನಾಡಿದರು.

ವಿರೋಧ ಪಕ್ಷದವರು ಏನೇ ತಂತ್ರ ಮಾಡಿದರೂ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರ ನಡೆಸಲಿದೆ. ನಂತರ ಮತ್ತೆ ಐದು ವರ್ಷ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮ ವಿಶ್ವಾಸ ನನಗಿದೆ. ಹೀಗಾಗಿ ನೀವು ನಮಗೆ ಶಕ್ತಿ ನೀಡಬೇಕು. ಈ ದೇಶವನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದರು.

#Karnataka #Mangaluru #congress #congress #Congressconvention #DKShivakumar

Previous Post

ರಾಜ್ಯ ಬಜೆಟ್‌ ಅನ್ನೇ ಅಸ್ತ್ರವಾಗಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ…

Next Post

ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!