• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
September 3, 2023
in ಇದೀಗ, ಕರ್ನಾಟಕ
0
ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂ ಬಿ ಪಾಟೀಲ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ( india) ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ (modi) ಅಲ್ಲ ಎಂದು ಕೆಪಿಸಿಸಿ (kpcc) ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ(mb patil) ಹೇಳಿದ್ದಾರೆ.

ಎಂಬಿ ಪಾಟೀಲ್‌

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭಾರೀ ಗೆಲುವಿಗೆ ಶ್ರಮಿಸಿದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪಕ್ಷದ ಪ್ರಚಾರ ಸಮಿತಿಗಳ ಪದಾಧಿಕಾರಿಗಳಿಗೆ ಭಾನುವಾರ ಪಕ್ಷದ ವತಿಯಿಂದ ಇಲ್ಲಿನ ಭಾರತ್ ಜೋಡೊ‌ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮುಂಬರುವ ಲೋಕಸಭಾ ಚುನಾವಣಾ ಪೂರ್ವ ತಯಾರಿ‌ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಉದಾತ್ತ ಇತಿಹಾಸ ಕಾಂಗ್ರೆಸ್ಗಿದೆ. ಇದಾದ ಮೇಲೆ ದೇಶದ ಚುಕ್ಕಾಣಿ ಹಿಡಿದ ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ದೇಶದಲ್ಲಿರುವ ಅಣೆಕಟ್ಟುಗಳಲ್ಲಿ ಶೇಕಡ 95 ರಷ್ಟು ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಹಾಗೆಯೇ ಐಐಎಂ, ಐಐಟಿ, ಏಮ್ಸ್, ಕ್ಷೀರಕ್ರಾಂತಿ, ಕೃಷಿ ಕ್ರಾಂತಿ, ಡಿಜಿಟಲ್ ಕ್ರಾಂತಿ ಇವೆಲ್ಲವನ್ನು ಮಾಡಿದ್ದು ನಮ್ಮ ಪಕ್ಷವೇ ಹೊರತು ಕೋಮುವಾದಿ ರಾಜಕಾರಣ ಮಾಡುತ್ತಿರುವ ಮೋದಿಯಲ್ಲ. ಅವರೇನಿದ್ದರೂ ಚೆನ್ನಾಗಿ ಭಾಷಣ ಮಾಡಬಲ್ಲರು ಅಷ್ಟೇ ಎಂದು ಅವರು ವ್ಯಂಗ್ಯವಾಡಿದರು.

ಈ ಸುದ್ದಿಯನ್ನ ಸಹ ಓದಿ: ಆದಿತ್ಯ-ಎಲ್‌1 ನೌಕೆಯ ಸೂರ್ಯನ ಕಕ್ಷೆಗೆ ಸೇರಿಸುವ ಮೊದಲ ಪ್ರಕ್ರಿಯೆ ಯಶಸ್ವಿ: ಇಸ್ರೊ

ದೇಶದಲ್ಲಿ ಬಡವರ ಸಬಲೀಕರಣ ಆಗಬೇಕೆಂಬ ಕನಸಿನೊಂದಿಗೆ ಆಹಾರ ಭದ್ರತೆ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ಸಿನದೇ ಆಗಿದೆ. ಜೊತೆಗೆ ದೇಶದ ಆರ್ಥಿಕ ಉದಾರಿಕರಣವನ್ನು ಸಾಧಿಸಿದ ಶ್ರೇಯಸ್ಸು ಪಿ ವಿ ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. ಕೇವಲ 100 ದಿನಗಳಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಇರುವ ಕಪ್ಪು ಹಣವನ್ನೆಲ್ಲ ತಂದು ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಮೋದಿ ಹೇಳಿದ್ದು ಈಗ ಅವರಿಗೇ ಮರೆತು ಹೋಗಿರಬೇಕು ಎಂದು ಅವರು ಟೀಕಿಸಿದರು.

ಕೆಪಿಸಿಸಿ ಪ್ರಚಾರ ಸಮಿತಿ ಸದ್ಯಕ್ಕೆ ಹೊಂದಿರುವ ಕಾರ್ಯ ಚಟುವಟಿಕೆ ಸಮಾಧಾನಕರವಾಗಿಲ್ಲ. ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಿ ಸಕ್ರಿಯಗೊಳಿಸಲಾಗುವುದು. ಈ ಸಂಬಂಧ ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರುಗಳ ಜೊತೆ ಚರ್ಚಿಸಲಾಗುವುದು ಎಂದು ಪಾಟೀಲ ಮಾಹಿತಿ ನೀಡಿದರು. ರಾಜ್ಯ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಕೇವಲ ಮೂರು ತಿಂಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಬಾಕಿ ಇರುವ ಯುವ ನಿಧಿ ಗ್ಯಾರಂಟಿ ಕೂಡ ಒಂದೆರಡು ತಿಂಗಳಲ್ಲಿ ಜಾರಿಯಾಗಲಿದೆ. ಇದನ್ನು ಪದಾಧಿಕಾರಿಗಳು ಪ್ರತಿಯೊಬ್ಬರ ಮನೆ ಬಾಗಿಲಿಗೂ ತಲುಪಿಸಬೇಕು ಇವುಗಳ ಬಲದ ಮೇಲೆ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠಪಕ್ಷ ರಾಜ್ಯದ 20 ಕ್ಷೇತ್ರಗಳನ್ನು ಗೆಲ್ಲಬೇಕು. ಇಲ್ಲದೇ ಹೋದರೆ ನಮ್ಮ ಗ್ಯಾರಂಟಿಗಳಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಅವರು ಕರೆ ನೀಡಿದರು.

ಮೋದಿಯವರು ಹೋದಲ್ಲೆಲ್ಲ ಭಾರತದ ಪ್ರತಿಯೊಂದು ಸಾಧನೆಗೂ ತಾವೇ ಕಾರಣ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ ಇದನ್ನು ನಾವು ಸಮರ್ಥವಾಗಿ ಎದುರಿಸಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಬಿ.ಎಲ್. ಶಂಕರ್, ವಿಧಾನ ಪರಿಷತ್ತಿನ ಸದಸ್ಯರಯಗಳಾದ ಮಂಜುನಾಥ ಭಂಡಾರಿ, ಯು.ಬಿ.ವೆಂಕಟೇಶ, ಸುಧಾಮದಾಸ್, ಶ್ರೀ ಪ್ರಕಾಶ ರಾಥೋಡ್ ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ, ಮಾಜಿ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ವಕ್ತಾರರಾದ ಶ್ರೀ ರಮೇಶ್ ಬಾಬು, ಸಮನ್ವಯಕಾರರಾದ ಶ್ರೀ ಎ.ಪಿ. ಬಸವರಾಜು, ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Tags: karanatakanewsKarnataka PoliticsKPCCMinister MB PatilModi
Previous Post

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ʼವೃಕ್ಷದೀಪʼ ಅಭಿಯಾನಕ್ಕೆ ಚಾಲನೆ

Next Post

ಸುಳ್ಳು ಹೇಳೋದೆ ಪ್ರತಾಪ್‌ ಸಿಂಹನಿಗೆ ಒಂದು ಚಾಳಿ: ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ಟೀಕೆ

Related Posts

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Read moreDetails

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
Next Post
ಪ್ರತಾಪ್‌ ಸಿಂಹ

ಸುಳ್ಳು ಹೇಳೋದೆ ಪ್ರತಾಪ್‌ ಸಿಂಹನಿಗೆ ಒಂದು ಚಾಳಿ: ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ಟೀಕೆ

Please login to join discussion

Recent News

Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada