ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರದ (JK) ಎಲ್ಲಾ ಒಂಬತ್ತು ಮತ ಎಣಿಕೆ ಕೇಂದ್ರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಸ್ಟ್ರಾಂಗ್ ರೂಂಗಳಲ್ಲಿ (Strong rooms) ಸಂಗ್ರಹಿಸಲಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳಿಗೆ (EVM) ಮೂರು ಹಂತದ ಭದ್ರತಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ನಾಳೆ ಎಲ್ಲಾ ಕ್ಷೇತ್ರಗಳ ಮತ ಎಣಿಕೆ(Counting) ನಡೆಯಲಿದ್ದು, ಈ ಹಿನ್ನೆಲೆ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವಭಾವಿ(Preliminary) ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಇತ್ತ ಪಶ್ಚಿಮ ಬಂಗಾಳದ (West Bengal) ಬಾರ್ಯಬರಿಯಲ್ಲಿ ತೃಣಮೂಲ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿದ್ದು, ಚುನಾವಣೆ(Election) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.ಅದರಂತೆ ಫಲಿತಾಂಶದ ಹಿಂದಿನ ದಿನ ಅಂದ್ರೆ ಇಂದು ರಾಸತ್ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್(Police) ಬಿಗಿ ಬಂದೋಬಸ್ತ್ ಮೂಲಕ ಮರು ಮತದಾನ ಪ್ರಕ್ರಿಯೆ ನಡೆಸಲಾಗ್ತಿದೆ.