• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

24 ಗಂಟೆಯೂ ಚಾರ್ಜ್‌ ಮಾಡಬಹುದಾದ ದೇಶದ ಮೊದಲ ಸೋಲಾರ್‌ ಇ.ವಿ ಚಾರ್ಜಿಂಗ್‌ ಕೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಬೆಸ್ಕಾಂ ವತಿಯಿಂದ ದಿನದ 24 ಗಂಟೆಯೂ ಚಾರ್ಜ್‌ ಮಾಡಬಹುದಾದ ದೇಶದ ಮೊದಲ ಸೌರಶಕ್ತಿ ಆಧಾರಿತ ಬ್ಯಾಟರಿ ಸ್ಟೋರೇಜ್‌ ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಸೆಂಟರ್‌ ದೇವನಹಳ್ಳಿಯಲ್ಲಿರುವ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿದ್ದು, ಸೆಪ್ಟೆಂಬರ್‌ ಅಂತ್ಯದ ಒಳಗೆ ಸೇವೆಗೆ ಲಭ್ಯವಾಗಲಿದೆ.

ADVERTISEMENT

ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಾರ್ಜಿಂಗ್‌ ಹಬ್‌ನಲ್ಲಿ ಏಕ ಕಾಲದಲ್ಲಿ 23 ವಾಹನಗಳನ್ನು ಚಾರ್ಜ್‌ ಮಾಡಬಹುದು.ಅದರಲ್ಲಿ ಅರ್ಧ ಗಂಟೆಯಿಂದ ಒಂದು ಗಂಟೆಯ ಒಳಗೆ ಚಾರ್ಜ್‌ ಮಾಡಬಹುದಾದ 20 ವೇಗದ (ಫಾಸ್ಟ್‌) ಚಾರ್ಜಿಂಗ್‌ ಪಾಯಿಂಟ್‌ಗಳಿವೆ. ಮೂರು ಸಾಮಾನ್ಯ ಚಾರ್ಜಿಂಗ್‌ ಪಾಯಿಂಟ್‌ಗಳೂ ಇವೆ.

ಜಿಐಜೆಡ್‌ ಮತ್ತು ನೂನಮ್ ಕಂಪನಿಗಳ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಈ ಹಬ್‌ನಲ್ಲಿ 50 ಕೆಡಬ್ಲ್ಯು, 30 ಕೆಡಬ್ಲ್ಯು ಸಾಮರ್ಥ್ಯ ಹೊಂದಿರುವ ವೇಗದ ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಒದಗಿಸಲಾಗುತ್ತಿದೆ. 7.5 ಕೆಡಬ್ಲ್ಯು ಮತ್ತು 3.3 ಕೆಡಬ್ಲ್ಯು ಸಾಮರ್ಥ್ಯದ ಸಾಮಾನ್ಯ ಚಾರ್ಜಿಂಗ್‌ ಪಾಯಿಂಟ್‌ಗಳನ್ನೂ ಒದಗಿಸಲಾಗುತ್ತದೆ.

ನಗರದಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೇ ವಿದ್ಯುತ್‌ ಚಾಲಿತ ವಾಹನಗಳ (ಇ.ವಿ) ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ.ವಿ.ಗಳೇ ಜಾಸ್ತಿ ಬರುತ್ತಿವೆ. ವಿಮಾನ ನಿಲ್ದಾಣದ ಆವರಣದಲ್ಲಿ ಇ.ವಿ ಚಾರ್ಜಿಂಗ್‌ ಪಾಯಿಂಟ್‌ಗಳಿವೆಯಾದರೂ ಅವು ವಿಮಾನ ನಿಲ್ದಾಣದ ವಾಹನಗಳಿಗೆ ಮಾತ್ರ ಬಳಕೆಗೆ ಸಿಗುತ್ತಿವೆ. ಖಾಸಗಿ ಏಜೆನ್ಸಿಗಳು ತಮ್ಮ ವಾಹನಗಳಿಗೆ ಎರಡು ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿರ್ಮಿಸಿವೆ. ಇದು ಕೂಡ ಸಾರ್ವಜನಿಕರ ಬಳಕೆಗೆ ಸಿಗುತ್ತಿಲ್ಲ.

ಇಂಟಿಗ್ರೇಟೆಡ್‌ (ಸಂಯೋಜಿತ) ವ್ಯವಸ್ಥೆಯಡಿ ತಲಾ ಎರಡು 45 ಕೆ.ವಿ ಸಾಮರ್ಥ್ಯದ 2 ಲೈಫ್‌ ಬ್ಯಾಟರಿಗಳು ಹಗಲಿನಲ್ಲಿ ಸೌರಶಕ್ತಿಯನ್ನು ಸಂಗ್ರಹಿಸಿ ರಾತ್ರಿ ಬಳಕೆ ಮಾಡುವುದರಿಂದ ದಿನದ 24 ಗಂಟೆಯೂ ಜಾರ್ಜಿಂಗ್‌ ಸೌಲಭ್ಯ ನೀಡಲು ಸಾಧ್ಯವಾಗಲಿದೆ. ಜೊತೆಗೆ ಸೆಕೆಂಡ್‌ ಲೈಫ್‌ ಕಾರ್‌ ಬ್ಯಾಟರಿಗಳನ್ನು ಕೂಡ ಸೌರಶಕ್ತಿ ಸಂಗ್ರಹಕ್ಕೆ ಬಳಸಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.

ವಿಮಾನ ನಿಲ್ದಾಣಕ್ಕೆ ಪ್ರತಿ ದಿನ ಸಾವಿರಾರು ವಾಹನಗಳು ಬರುತ್ತಿವೆ. ಅವುಗಳಲ್ಲಿ ಇ.ವಿಗಳನ್ನು ಚಾರ್ಜ್‌ ಮಾಡಲು ಬೇರೆಡೆಗೆ ಹುಡುಕೊಂಡು ಹೋಗಬೇಕಿತ್ತು. ಈ ಸಮಸ್ಯೆ ತಪ್ಪಿಸಲು ವಿಮಾನ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಿಂದ ಕೇವಲ 1.5 ಕಿ.ಮೀ. ದೂರದಲ್ಲಿರುವ ಬೆಸ್ಕಾಂನ 224 ಕೆ.ವಿ. ಪವರ್‌ ಸ್ಟೇಷನ್‌ ಜಾಗದಲ್ಲಿ ಸೋಲಾರ್‌ ಚಾರ್ಜಿಂಗ್ ಸೆಂಟರ್‌ ನಿರ್ಮಾಣಗೊಳ್ಳುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದರು.

2500 ಇ.ವಿ ಚಾರ್ಜಿಂಗ್‌ ಸೆಂಟರ್‌ ಶೀಘ್ರ ಸ್ಥಾಪನೆ.

ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಗಣನೀಯವಾಗಿ ಜಾಸ್ತಿಯಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಇಂಧನ ಸಚಿವರು ರಾಜ್ಯದಾದ್ಯಂತ ಇ.ವಿ ಚಾರ್ಜಿಂಗ್ ಸೆಂಟರ್‌ಗಳನ್ನು ಆರಂಭಿಸಲು ಮುತುವರ್ಜಿ ವಹಿಸಿದ್ದಾರೆ. ದೇವನಹಳ್ಳಿಯಲ್ಲಿ ದೊಡ್ಡಮಟ್ಟದಲ್ಲಿ ಇ.ವಿ ಚಾರ್ಜಿಂಗ್‌ ಹಬ್‌ ನಿರ್ಮಾಣಗೊಳ್ಳುತ್ತಿದೆ. ಇನ್ನು ಒಂದು ತಿಂಗಳೊಳಗೆ ಉದ್ಘಾಟನೆಗೊಳ್ಳಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ಅಂದರೆ 4.80 ಲಕ್ಷ ವಿದ್ಯುತ್‌ಚಾಲಿತ ವಾಹನಗಳು ಕರ್ನಾಟಕದಲ್ಲಿಯೇ ಇವೆ. ಅದಕ್ಕೆ ಸರಿಯಾಗಿ 5765 ಇವಿ ಚಾರ್ಜಿಂಗ್‌ ಕೇಂದ್ರಗಳೂ ಇವೆ. ಅದರಲ್ಲಿ 4462 ಕೇಂದ್ರಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿಯಲ್ಲಿವೆ ಎಂದು ಮಾಹಿತಿ ನೀಡಿದರು.ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 2500 ಇವಿ ಚಾರ್ಚಿಂಗ್ ಕೇಂದ್ರಗಳನ್ನು ತೆರೆಯಲು ಟೆಂಡರ್‌ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ವಿವರ ನೀಡಿದರು.

Tags: Energy Minister KJ GeorgeEV Charging StationInternational Airport
Previous Post

ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಚೊಚ್ಚಲ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಪಿ.ಸಿ.ಶೇಖರ್.

Next Post

ರಷ್ಯಾ-ಉಕ್ರೇನ್ ಯುದ್ಧ ಶಮನಕ್ಕೆ ಮುಂದಾದ ಮೋದಿ ?! ಉಕ್ರೆನ್‌ಗೆ ಭೇಟಿ ಕೊಟ್ಟ ನಮೋ !

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಮೌನ ಮುರಿದು ಟೀಕಾಕಾರರಿಗೆ ಅಸ್ತ್ರ ಆದ್ರಾ ನರೇಂದ್ರ ಮೋದಿ..

ರಷ್ಯಾ-ಉಕ್ರೇನ್ ಯುದ್ಧ ಶಮನಕ್ಕೆ ಮುಂದಾದ ಮೋದಿ ?! ಉಕ್ರೆನ್‌ಗೆ ಭೇಟಿ ಕೊಟ್ಟ ನಮೋ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada