ಬೆಂಗಳೂರು: ದೇಶದ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಮ್ಮ ಸರಳ ಜೀವನಶೈಲಿಯ ಬಗ್ಗೆ ಮಾತನಾಡಿದ್ದಾರೆ. ಅಪಾರ ಆಸ್ತಿ ಹೊಂದಿದ್ದರೂ, ವೈಯಕ್ತಿಕ ಜೀವನದಲ್ಲಿ ದುಂದುವೆಚ್ಚ ಮಾಡುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ತಾವು ಮಾಡಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಅಗತ್ಯವಿರುವಷ್ಟೇ ಹಣ ಖರ್ಚು ಮಾಡುತ್ತೇನೆ. ಅನಗತ್ಯ ದುಂದುವೆಚ್ಚ ಮಾಡುವುದು ತಮ್ಮ ಸ್ವಭಾವವಲ್ಲ ಎಂದು ಅವರು ಹೇಳಿದ್ದಾರೆ.

ಮುಂಗಾರು ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮಾತನಾಡಿದ್ದ ಡಿಕೆ ಶಿವಕುಮಾರ್, ತಾವು ಮುಖ್ಯಮಂತ್ರಿ ಸ್ಥಾನವನ್ನು ಹಣ ಸಂಪಾದಿಸಲು ಬಳಸಿಕೊಳ್ಳುವುದಿಲ್ಲ. ಕರ್ನಾಟಕದಲ್ಲಿ ಹೊಸ ಇತಿಹಾಸ ನಿರ್ಮಿಸುವ ಉದ್ದೇಶದಿಂದ ಈ ಹುದ್ದೆಯನ್ನು ಬಳಸಿಕೊಳ್ಳುತ್ತೇನೆ ಎಂದು ಹೇಳಿದ್ದರು.ತಮ್ಮ ಪೂರ್ವಜರು ಹಾಗೂ ತಾವು ಸಂಪಾದಿಸಿರುವ ಆಸ್ತಿಯೇ ಎರಡು-ಮೂರು ತಲೆಮಾರುಗಳಿಗೆ ಸಾಕಾಗುವಷ್ಟಿದೆ. ಹೀಗಾಗಿ ಹಣ ಮಾಡುವ ಉದ್ದೇಶ ತಮ್ಮದಲ್ಲ, ಕರ್ನಾಟಕದ ಅಭಿವೃದ್ಧಿಯೇ ತಮ್ಮ ಪ್ರಮುಖ ಗುರಿ ಎಂದು ಅವರು ಸ್ಪಷ್ಟಪಡಿಸಿದ್ದರು.ಸಂದರ್ಶನದಲ್ಲಿ ತಮ್ಮ ಸರಳ ಜೀವನಶೈಲಿಯ ಕುರಿತು ಮಾತನಾಡಿದ ಅವರು, “ಜೀವನ ನಡೆಸಲು ಎಷ್ಟು ಅಗತ್ಯವೋ ಅಷ್ಟೇ ಖರ್ಚು ಮಾಡುತ್ತೇನೆ. ದೆಹಲಿಯಲ್ಲಿಯೂ ₹50 ಕೊಟ್ಟು ಹೇರ್‌ಕಟ್ ಮಾಡಿಸಿಕೊಳ್ಳುತ್ತೇನೆ. ಸರಳ ಜೀವನ ನನ್ನ ಆಯ್ಕೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

ಇದೇ ವೇಳೆ ತಮ್ಮನ್ನು ‘ಕಾಂಗ್ರೆಸ್‌ನ ಅಮಿತ್ ಶಾ’ ಎಂದು ಕರೆಯುವುದಕ್ಕೂ ಡಿಕೆ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ತಾನು ಅಮಿತ್ ಶಾ ಆಗಲು ಬಯಸುವುದಿಲ್ಲ. ತಾನು ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನಾಗಿದ್ದು, ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು ತನ್ನ ಕರ್ತವ್ಯ ಎಂದು ಹೇಳಿದ್ದಾರೆ.ಮುಂಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಡಿಕೆ ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆದ್ದು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.






